HomeLatest News‘ಫಿಟ್ ಇಂಡಿಯಾ’ ಕಾರ್ಯಕ್ರಮ ಅಡಿಯಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಸೈಕಲ್ ಜಾಥಾ

‘ಫಿಟ್ ಇಂಡಿಯಾ’ ಕಾರ್ಯಕ್ರಮ ಅಡಿಯಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಸೈಕಲ್ ಜಾಥಾ

ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಫಿಟ್ ಇಂಡಿಯಾ ಕಾರ್ಯಕ್ರಮದ ಅಡಿಯಲ್ಲಿ ವಿಶ್ವ ಸೈಕಲ್ ದಿನದಂದು ನಗರದ ಪ್ರಮುಖ ವೃತ್ತ, ರಸ್ತೆಗಳಲ್ಲಿ ಸೈಕಲ್ ಜಾಥಾ ನಡೆಯಿತು.

ಜಿಲ್ಲಾ ಪೊಲೀಸ್ ಕಛೇರಿ ಆವರಣದಲ್ಲಿ ಭಾನುವಾರ ಬೆಳಿಗ್ಗೆ ವಿಶ್ವ ಸೈಕಲ್ ದಿನಾಚರಣೆ ಅಂಗವಾಗಿ ಪೊಲೀಸ್ ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ರವರು ಸೈಕಲ್ ಜಾಥಾಕ್ಕೆ ಚಾಲನೆ ನೀಡಿದರು.

ಸೈಕಲ್ ಜಾಥಾವು ಶಿವಮೊಗ್ಗ ಎಸ್ಪಿ ಕಛೇರಿಯಿಂದ ಆರಂಭಗೊಂಡು ಬಿ.ಹೆಚ್.ರಸ್ತೆಯ ಅಶೋಕ ವೃತ್ತ, ಎಎವೃತ್ತ, ಶಿವಪ್ಪ ನಾಯಕ ವೃತ್ತ, ವಿಶ್ವೇಶ್ವರಯ್ಯ ವೃತ್ತ, ಶಂಕರಮಠ ವೃತ್ತ, ಸರ್ವಜ್ಞ ವೃತ್ತ, ಉಷಾ ನರ್ಸಿಂಗ್ ಹೋಂ ಅಕ್ಕಮಹಾದೇವಿ ವೃತ್ತ, ಲಕ್ಷ್ಮೀ ಟ್ಯಾಕೀಸ್, ಪೊಲೀಸ್ ಚೌಕಿ, ತರಕಾರಿ ಮಾರ್ಕೆಟ್ ಎಪಿಎಂಸಿ, ಆಲ್ಕೋಳ ವೃತ್ತ, ಐಬಿ ವೃತ್ತದ ಮೂಲಕ ಸ್ವಸ್ಥಾನಕ್ಕೆ ಬಂದು ಜಾಥಾ ಮುಕ್ತಾಯವಾಯಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಾಥಾದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ಸಿಬ್ಬಂದಿಗಳು, ಗೃಹರಕ್ಷಕ ದಳದ ಸಿಬ್ಬಂದಿಗಳು, ಶಿವಮೊಗ್ಗ ಸೈಕಲ್ ಕ್ಲಬ್ ನವರು ಹಾಗೂ ಸಾರ್ವಜನಿಕರು ನೂರಕ್ಕೆ ಹೆಚ್ಚು ಸವಾರರು, ಈ ಜಾಥಾದಲ್ಲಿ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಡಿವೈಎಸ್ಪಿ ಸಂಜೀವ್ ಕುಮಾರ್, ಕೃಷ್ಣ ಮೂರ್ತಿ, ದೀಲಿಪ್, ಇನ್ಸ್ಪೆಕ್ಟರ್ ಸಿದ್ದೇಗೌಡ, ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ತಿರುಮಲೇಶ್, ನವೀನ್ ಹಾಗೂ ಜಿಲ್ಲಾ ಗೃಹರಕ್ಷಕ ದಳದ ತರಭೇತಿ ಅಧಿಕಾರಿ ಹರೀಶ್ ಎಸ್ ಪಾಟೀಲ್, ಹಾಗೂ ಪೊಲೀಸ್ ಮತ್ತು ಗೃಹರಕ್ಷಕ ದಳದ ಸಿಬ್ಬಂದಿಗಳು, ಶಿವಮೊಗ್ಗ ಸೈಕಲ್ ಕ್ಲಬ್ ನವರು, ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular