HomeLatest Newsಕನ್ನಡಕ್ಕೆ ಮೊದಲ ಬೂಕರ್ ಪ್ರಶಸ್ತಿ ಬಂದ ಹಿನ್ನೆಲೆ ಬಾನು ಮುಷ್ತಾಕ್, ದೀಪಾ ಭಾಸ್ತಿಗೆ ಇಂದು ಸರ್ಕಾರದ...

ಕನ್ನಡಕ್ಕೆ ಮೊದಲ ಬೂಕರ್ ಪ್ರಶಸ್ತಿ ಬಂದ ಹಿನ್ನೆಲೆ ಬಾನು ಮುಷ್ತಾಕ್, ದೀಪಾ ಭಾಸ್ತಿಗೆ ಇಂದು ಸರ್ಕಾರದ ಅಭಿನಂದನೆ

ಬೆಂಗಳೂರು: ಕನ್ನಡಕ್ಕೆ ಮೊದಲ ಬೂಕರ್ ಪ್ರಶಸ್ತಿ ಬಂದ ಹಿನ್ನೆಲೆಯಲ್ಲಿ ಇಂದು ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್, ದೀಪಾ ಭಾಸ್ತಿ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸೋಮವಾರ ಅಭಿನಂದನೆ ಸಮಾರಂಭ ಏರ್ಪಡಿಸಲಾಗಿದೆ.

ಬೆಳಗ್ಗೆ 11 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ,ಕೆ, ಶಿವಕುಮಾರ್, ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್, ಸಭಾಪತಿ ಬಸವರಾಜ ಹೊರಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಬೂಕರ್ ಪ್ರಶಸ್ತಿ ವಿಜೇತರನ್ನು ಸನ್ಮಾನಿಸಿ ಗೌರವಿಸಲಿದ್ದಾರೆ.

ಲೇಖಕಿ ಮತ್ತು ವಕೀಲರಾಗಿರುವ ಬಾನು ಮುಷ್ತಾಕ್ ಅವರ ‘ಹಾರ್ಟ್ ಲ್ಯಾಂಪ್’ ಕೃತಿಗೆ ಬೂಕರ್ ಪ್ರಶಸ್ತಿ ಲಭಿಸಿದೆ. ಕಳೆದ ವಾರ ಲಂಡನ್ ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಿದ್ದಾರೆ. 1990 ರಿಂದ 2023ರ ನಡುವೆ ಬಾನು ಮುಷ್ತಾಕ್ ಅವರು ಬರೆದ 12 ಕಥೆಗಳ ಸಂಗ್ರಹದ ‘ಹಾರ್ಟ್ ಲ್ಯಾಂಪ್’ ಕೃತಿ ದಕ್ಷಿಣ ಭಾರತದ ಮುಸ್ಲಿಂ ಸಮುದಾಯದ ಮಹಿಳೆಯರ ದೈನಂದಿನ ಜೀವನದ ಅನುಭವಗಳನ್ನು ಒಳಗೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular