HomeLatest Newsಪಶ್ಚಿಮ ಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನಕ್ಕೆ ಮುಂದಾದ ಸರ್ಕಾರ: 3 ತಿಂಗಳಲ್ಲಿ ವರದಿ ಸಲ್ಲಿಸಲು ಅರಣ್ಯ...

ಪಶ್ಚಿಮ ಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನಕ್ಕೆ ಮುಂದಾದ ಸರ್ಕಾರ: 3 ತಿಂಗಳಲ್ಲಿ ವರದಿ ಸಲ್ಲಿಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ | Carrying capacity of the Western Ghats

ಬೆಂಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಕುಸಿತದ ಆತಂಕವಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನಕ್ಕೆ ಸರ್ಕಾರ ಮುಂದಾಗಿದೆ.

ಮೂರು ತಿಂಗಳಲ್ಲಿ ವರದಿ ಸಲ್ಲಿಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಮಳೆಯ ಸಂದರ್ಭದಲ್ಲಿ ಕೆಲವು ಭಾಗಗಳಲ್ಲಿ ವ್ಯಾಪಕವಾಗಿ ಭೂಕುಸಿತ ಉಂಟಾಗುತ್ತಿದೆ. ಧಾರಣಾ ಸಾಮರ್ಥ್ಯ ನೋಡಿಕೊಂಡು ಪರಿಹಾರ ಮಾರ್ಗ ಕಂಡುಕೊಳ್ಳಲು ಸರ್ಕಾರ ಕ್ರಮ ಕೈಗೊಂಡಿದೆ.

ಅರಣ್ಯ ಸಚಿವರ ಸೂಚನೆ ಸಾರಾಂಶ:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕದ ಅರಣ್ಯಗಳ ಪೈಕಿ ಶೇ.60ರಷ್ಟು ಜೀವವೈವಿಧ್ಯತೆಯ ತಾಣವಾದ ಪಶ್ಚಿಮಘಟ್ಟ ಪ್ರದೇಶದಲ್ಲಿದ್ದು, ಇದು ಸಸ್ಯಸಂಕುಲ, ಪ್ರಾಣಿ ಸಂಕಲು, ಕೀಟ ಸಂಕುಲಗಳ ನೆಲೆವೀಡಾಗಿದೆ. ಮಿಗಿಲಾಗಿ ಮಾರುತಗಳನ್ನು ತಡೆದು ದೇಶಾದ್ಯಂತ ಮಳೆ ಸುರಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ.

ಇಂತಹ ಮಹತ್ವದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಹಲವು ರಸ್ತೆಗಳು, ಯೋಜನೆಗಳು ಕಾರ್ಯಗತವಾಗುತ್ತಿದ್ದು, ಇದರಿಂದ ಪಶ್ಚಿಮಘಟ್ಟ ಅಪಾಯಕ್ಕೆ ಸಿಲುಕಿ, ಭೂಕುಸಿತಗಳು ಸಂಭವಿಸುತ್ತಿದೆ. ಇದರಿಂದ ಅಮೂಲ್ಯ ಜೀವಹಾನಿ, ಆಸ್ತಿ ಹಾನಿ ಹಾಗೂ ಬೆಳೆ ಹಾನಿ ಸಂಭವಿಸುತ್ತಿದ್ದು, ಸಸ್ಯಸಂಕುಲ, ಪ್ರಾಣಿಸಂಕುಲಕ್ಕೂ ಸಂಕಷ್ಟ ಎದುರಾಗಿರುವುದರ ಜೊತೆಗೆ ಮುಂಬರುವ ದಿನಗಳಲ್ಲಿ ರಾಜ್ಯಕ್ಕೆ ತೀವ್ರ ಜಲ ಕ್ಷಾಮ ಎದುರಾಗುವ ಭೀತಿ ಇದೆ ಎಂದು ಪರಿಸರ ತಜ್ಞರು, ವಿಜ್ಞಾನಿಗಳು ಹಾಗೂ ಪರಿಸರ ಪ್ರೇಮಿಗಳು ಆತಂಕ ವ್ಯಕ್ತಪಡಿಸಿರುತ್ತಾರೆ.

ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ ಪಶ್ಚಿಮಘಟ್ಟದ ತಾಳಿಕೊಳ್ಳುವ (ಧಾರಣ) ಸಾಮರ್ಥ್ಯ ಅಂದರೆ Carrying Capacity ಕುರಿತಂತೆ ಅಧ್ಯಯನ ಕೈಗೊಂಡು 3 ತಿಂಗಳ ಒಳಗಾಗಿ ಸಮಗ್ರ ವರದಿಯನ್ನು ಕಡತದಲ್ಲಿ ಸಲ್ಲಿಸಲು ಸೂಚಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular