HomeLatest NewsBREAKING : ಬೆಂಗಳೂರಲ್ಲಿ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಕೇಸ್ : ಕಾಲಿಗೆ ಬಿದ್ದು ಕ್ಷಮೆ...

BREAKING : ಬೆಂಗಳೂರಲ್ಲಿ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಕೇಸ್ : ಕಾಲಿಗೆ ಬಿದ್ದು ಕ್ಷಮೆ ಕೇಳಿದ ದಂಪತಿ |WATCH VIDEO

ಬೆಂಗಳೂರು: ಬೆಂಗಳೂರಿನಲ್ಲಿ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಪತಿ ಕಾಲಿಗೆ ಬಿದ್ದು ಕ್ಷಮೆ ಕೇಳಿದ್ದಾರೆ.

ಬಿಹಾರ ಮೂಲದ ಪನ್ಸೂರಿ ಎಂಬ ಮಹಿಳೆ ಬೆಂಗಳೂರಿನ ಬೆಳ್ಳಂದೂರು ಠಾಣೆ ವ್ಯಾಪ್ತಿಯಲ್ಲಿ ಮೇ 28ರಂದು ಆಟೋ ಚಾಲಕನಿಗೆ ಚಪ್ಪಲಿಂದ ಥಳಿಸಿದ ಘಟನೆ ನಡೆದಿತ್ತು. ಈ ಬಗ್ಗೆ ಆಟೋ ಚಾಲಕ ಲೋಕೇಶ್ ಬೆಳ್ಳಂದೂರು ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಂದು ಹಲ್ಲೆ ನಡೆಸಿದ ಮಹಿಳೆಯನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಮಹಿಳೆ, ತಾನು ಪತಿಯೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಆಟೋ ಹಿಂಬದಿಯಿಂದ ಬಂದು ಬೈಕ್ ಗೆ ಡಿಕ್ಕಿಹೊಡೆದಿದೆ. ಇದನ್ನು ಪ್ರಶ್ನಿಸಿದ್ದಕ್ಕೆ ಆಟೋ ಚಾಲಕ ಗಲಾಟೆ ಮಾಡಿ ಹಲ್ಲೆಗೆ ಮುಂದಾಗಿದ್ದಾನೆ. ಇದರಿಂದ ಕೋಪಗೊಂಡು ತಾನು ಆತನಿಗೆ ಹೊಡೆದಿದ್ದೇನೆ ಎಂದು ಮಹಿಳೆ ಹೇಳಿಕೆ ನೀಡಿದ್ದರು.
ಪೊಲೀಸರ ಸೂಚನೆಗೆ ಮೇರೆಗೆ ಭಾನುವಾರ ಠಾಣೆಗೆ ಬಂದ ದಂಪತಿಯನ್ನು ಪೊಲೀಸರು ವಿಚಾರಣೆ ನಡೆಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಚಾರಣೆಗೆ ಪೊಲೀಸ್ ಠಾಣೆಗೆ ಬಂದಿದ್ದ ದಂಪತಿ ಆಟೋ ಚಾಲಕನಿಗೆ ಕ್ಷಮೆ ಕೇಳಿದ್ದಾರೆ. ತನ್ನನ್ನು ಕ್ಷಮಿಸುವಂತೆ ಕಾಲಿಗೆ ಬಿದ್ದು ಬೇಡಿಕೊಂಡಿದ್ದಾರೆ. ಎಲ್ಲಾ ಕನ್ನಡಿಗರಿಗೂ ಕ್ಷಮೆ ಕೇಳುತ್ತೇನೆ ಇನ್ನೊಮ್ಮೆ ಹೀಗೆ ಮಾಡಲ್ಲ ಎಂದು ಹೇಳಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular