ಸಾರ್ವಜನಿಕರಿಗೆ ಗುಡ್ ನ್ಯೂಸ್: ಸರ್ಕಾರಿ ಆಸ್ಪತ್ರೆ, ಆರೋಗ್ಯ ಸೇವೆ ಬಗ್ಗೆ ದೂರುಗಳಿದ್ದಲ್ಲಿ ವಾಟ್ಸಾಪ್ ನಲ್ಲೂ ಕಳಿಸಲು ಅವಕಾಶ

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳು ಆರೋಗ್ಯ ಸೇವೆಗಳ ಬಗ್ಗೆ ದೂರುಗಳಿದ್ದಲ್ಲಿ ವಾಟ್ಸಾಪ್ ಮೂಲಕ ಕಳಿಸುವ ಅವಕಾಶವನ್ನು ಆರೋಗ್ಯ ಇಲಾಖೆ ಕಲ್ಪಿಸಿದೆ.

94498 43001 ಈ ಮೊಬೈಲ್ ಸಂಖ್ಯೆಗೆ ಸರ್ಕಾರಿ ಆಸ್ಪತ್ರೆಗಳು ಅಥವಾ ಆರೋಗ್ಯ ಸೇವೆಗಳ ಬಗ್ಗೆ ದೂರುಗಳು ಅಥವಾ ಸಲಹೆಗಳನ್ನು ರೋಗಿಗಳು, ಅವರ ಸಹಾಯಕರು ಹಾಗೂ ಸಾರ್ವಜನಿಕರು ಕಳುಹಿಸಬಹುದಾಗಿದೆ.

ಅಗತ್ಯವಿದ್ದಲ್ಲಿ ದೂರುಗಳಿಗೆ ಸಂಬಂಧಿಸಿದ ಫೋಟೋ ಮತ್ತು ವಿಡಿಯೋಗಳನ್ನು ಕಳುಹಿಸುವಂತೆ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಈ ದೂರುಗಳನ್ನು ಇಲಾಖೆಯ ಪ್ರಧಾನ ಕಾರ್ಯದರ್ಶಿಯವರೇ ಪರಿಶೀಲಿಸಿ ಕ್ರಮ ಕೈಗೊಳ್ಳಲಿದ್ದಾರೆ. ಮಾಹಿತಿದಾರರ ವಿವರಗಳನ್ನು ಗೌಪ್ಯವಾಗಿ ಇಡಲಾಗುವುದು. ವಾಟ್ಸಾಪ್ಪ್ ಸಂಖ್ಯೆಯ ಮೂಲಕ ಸಂದೇಶಗಳನ್ನು ಮಾತ್ರ ಸ್ವೀಕರಿಸಲಾಗುತ್ತದೆ. ಕರೆಗಳಿಗೆ ಅವಕಾಶ ಇರುವುದಿಲ್ಲ ಎಂದು ಹೇಳಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read