ಬೆಂಗಳೂರಿನಲ್ಲಿ ಯುವತಿ ಮೇಲೆ ಬಿಎಂಟಿಸಿ ಬಸ್ ಹತ್ತಿಸಲು ಚಾಲಕ ಯತ್ನಿಸಿದ್ದು, ಆಘಾತಕಾರಿ ವೀಡಿಯೋ ವೈರಲ್ ಆಗಿದೆ.
ಮೇ 23 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಸಿಗ್ನಲ್ನಲ್ಲಿ ಈ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಚಾಲಕನೊಬ್ಬ ಮಹಿಳೆಯ ಮೇಲೆ ಬಸ್ ಹತ್ತಿಸಲು ಯತ್ನಿಸಿದ ಆಘಾತಕಾರಿ ಘಟನೆ ನಡೆದಿದೆ. ಈ ಘಟನೆ ಒಂದು ವಾರದ ಹಿಂದೆ ನಡೆದಿದ್ದರೂ, ಹತ್ತಿರದ ಕಾರಿನ ಡ್ಯಾಶ್ಕ್ಯಾಮ್ ದೃಶ್ಯಗಳು ಆನ್ಲೈನ್ನಲ್ಲಿ ವೈರಲ್ ಆದ ನಂತರ ಇದು ಬೆಳಕಿಗೆ ಬಂದಿದೆ. ಮಹಿಳೆ ಕಾರಿನ ಮುಂದೆ ನಿಂತಿದ್ದಾಗ ಬಸ್ ಚಾಲಕ ಅಜಾಗರೂಕತೆಯಿಂದ ವಾಹನವನ್ನು ಮುಂದಕ್ಕೆ ಚಲಿಸುತ್ತಿರುವುದನ್ನು ವೀಡಿಯೊ ತೋರಿಸುತ್ತದೆ.
ರಸ್ತೆಯಲ್ಲಿ ಬಿಎಂಟಿಸಿ ಬಸ್ ಚಾಲಕ ಹಾಗೂ ಕಾರು ಚಲಾಯಿಸುತ್ತಿದ್ದ ಯುವತಿ ನಡುವೆ ಗಲಾಟೆ ಆಗಿದೆ. ಕಾರಿನಿಂದ ಇಳಿದು ಬಂದ ಯುವತಿ ಬಸ್ ಅಡ್ಡಗಟ್ಟಿ ಚಾಲಕನನ್ನು ಪ್ರಶ್ನಿಸಿದ್ದಾಳೆ ಎನ್ನಲಾಗಿದೆ. ಬಸ್ ಹತ್ತಿಸಲು ಯತ್ನಿಸಿದ ಚಾಲಕ ಪ್ರಶಾಂತ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

