HomeLatest NewsBIG NEWS: ಹೇಮಾವತಿ ಲಿಂಕ್ ಕೆನಾಲ್ ಗೆ ವಿರೋಧಿಸಿ ಪ್ರತಿಭಟಿಸಿದವರ ವಿರುದ್ಧ FIR ದಾಖಲು: ಸರ್ಕಾರದ...

BIG NEWS: ಹೇಮಾವತಿ ಲಿಂಕ್ ಕೆನಾಲ್ ಗೆ ವಿರೋಧಿಸಿ ಪ್ರತಿಭಟಿಸಿದವರ ವಿರುದ್ಧ FIR ದಾಖಲು: ಸರ್ಕಾರದ ವಿರುದ್ಧ ಮತ್ತಷ್ಟು ಹೋರಾಟಕ್ಕೆ ಮುಂದಾದ ರೈತರು!

ತುಮಕೂರು: ಹೇಮಾವತಿ ಲಿಂಕ್ ಕೆನಾಲ್ ಗೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸಿದ್ದ ಹಿನ್ನೆಲೆಯಲ್ಲಿ ಹೋರಾಟದಲ್ಲಿ ಭಾಗಿಯಾಗಿದ್ದ 11 ಜನರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಇದರಿಂದ ಮತ್ತಷ್ಟು ರೊಚ್ಚಿಗೆದ್ದಿರುವ ರೈತರು ಹೋರಾಟ ತೀವ್ರಗೊಳಿಸಲು ಮುಂದಾಗಿದ್ದಾರೆ.

ಹೋರಾಟ ಸಮಿತಿ ಸರ್ಕಾರದ ವಿರುದ್ಧ ಮುಂದಿನ ಹೋರಾಟ ನಡೆಸುವ ನಿಟ್ಟಿನಲ್ಲಿ ಚರ್ಚಿಸಲು ಇಂದು ಸಭೆ ಕರೆದಿದೆ. ಎಫ್ ಐ ಆರ್ ದಾಖಲಿಸಿದ ಕ್ರಮ ಖಂಡಿಸಿ ರೈತಮುಖಂಡರು ಇನ್ನಷ್ಟು ಹೋರಾಟ ನಡೆಸುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ವಿರೋಧಿಸಿ ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ಭಾರಿ ಪ್ರತಿಭಟನೆ ನಡೆಸಿದ್ದರು, ರಾಷ್ಟ್ರೀಯ ಹೆದ್ದಾರಿಯಲ್ಲಿ ಟೈರ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರತಿಭಟನೆ ನಡೆಸಿದ್ದ ರೈತರು, ಮೂವರು ಶಾಸಕರು, ಇಬ್ಬರು ಸ್ವಾಮೀಜಿಗಳು ಸೇರಿದಂತೆ ಒಟ್ಟು 11 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular