HomeLatest Newsಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಬಂಧಿಸಿದರೆ ಮುಂದಾಗುವ ಅನಾಹುತಕ್ಕೆ ಸರ್ಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕ್ಕೆ

ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಬಂಧಿಸಿದರೆ ಮುಂದಾಗುವ ಅನಾಹುತಕ್ಕೆ ಸರ್ಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕ್ಕೆ

ಕೊಪ್ಪಳ: ಕರಾವಳಿ ಜಿಲ್ಲೆಗಳಲ್ಲಿ ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಬಂಧಿಸಲಾಗುತ್ತಿದೆ. ಹಿಂದೂಗಳನ್ನು ಟಾರ್ಗೆಟ್ ಮಾಡಿದರೆ ಮುಂದಾಗುವ ಅನಾಹುತಕ್ಕೆ ರಾಜ್ಯ ಸರ್ಕಾರವೇ ಹೊಣೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ.

ಕೊಪ್ಪಳ ಜಿಲೆಯ ಕುಷ್ಟಗಿಯಲ್ಲಿ ಮಾತನಾಡಿದ ವಿಜಯೇಂದ್ರ, ಪೊಲೀಸರ ಮೇಲೆ ಒತ್ತಡ ಹಾಕಿ ಅಮಾಯಕ ಹಿಂದೂ ಕಾರ್ಯಕರ್ತರನ್ನು ಸರ್ಕಾರ ಬಂಧಿಸುತ್ತಿದೆ. ಮಧ್ಯರಾತ್ರಿ ಹಿಂದೂ ಮುಖಂಡರು ಹಾಗೂ ಸಂಘ ಪರಿವಾರದ ಮುಖಂಡರ ಮನೆ ಮನೆಗೆ ತೆರಳಿ ಪೊಲೀಸರು ಬಾಗಿಲು ತಟ್ಟುತ್ತಿದ್ದಾರೆ. ಕೆಲವರನ್ನು ಓಲೈಕೆ ಮಾಡಲು ರಾಜ್ಯ ಸರ್ಕಾರ ಈ ರೀತಿ ಮಾಡುತ್ತಿದೆ. ತಪ್ಪಿತಸ್ಥರನ್ನು ಬಂಧಿಸಿದರೆ ನಮ್ಮ ಅಭ್ಯಂತರವಿಲ್ಲ. ಆದರೆ ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಬಂಧಿಸುವುದು ಸರಿಯಲ್ಲ ಎಂದರು.

ಕರಾವಳಿಯಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಕೆಟ್ಟಿದೆ. ಪದೇ ಪದೇ ಕೊಲೆ ಪ್ರಕರಣ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular