ಶಿವಮೊಗ್ಗ: ಶಿವಮೊಗ್ಗದಲ್ಲಿ ನೇಣು ಹಾಕಿಕೊಂಡು ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರು ಮೂಲದ ವಿಷ್ಣುಪ್ರಿಯಾ(22) ನೇಣಿಗೆ ಶರಣಾದ ವಿದ್ಯಾರ್ಥಿನಿ.
ಶಿವಮೊಗ್ಗದ ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿಷ್ಣುಪ್ರಿಯಾ ವ್ಯಾಸಂಗ ಮಾಡುತ್ತಿದ್ದರು. ಹಾಸ್ಟೆಲ್ ನಲ್ಲಿಯೇ ವಿಷ್ಣುಪ್ರಿಯಾ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಇಂಟರ್ನ್ಶಿಪ್ ಮುಗಿಯಲು ಇನ್ನೂ 10 ದಿನ ಮಾತ್ರ ಬಾಕಿ ಉಳಿದಿತ್ತು.
ಮೃತ ವಿದ್ಯಾರ್ಥಿನಿಯ ಪೋಷಕರು ಬರ್ಲಿನ್ ದೇಶದಲ್ಲಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ವಿದ್ಯಾರ್ಥಿನಿ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.