ಬೆಂಗಳೂರು: ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಆರ್.ಎಸ್.ಎಸ್. ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಜಪೆಯಲ್ಲಿ ಹತ್ಯೆಗೀಡಾಗಿದ್ದ ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಸಮಾಜದ ಸ್ವಾಸ್ಥ್ಯ ಕೆಡುವಂತೆ ಮತೀಯ ಗುಂಪುಗಳ ನಡುವೆ ವೈಮನ್ಸು ಉಂಟು ಮಾಡುವಂತೆ ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ಐಆರ್ ದಾಖಲಿಸಿದ್ದು, ರದ್ದುಪಡಿಸುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಭಾಷಣದ ಹಲವು ದಿನಗಳ ನಂತರ ದುರುದ್ದೇಶದಿಂದ ಎಫ್ಐಆರ್ ದಾಖಲಿಸಲಾಗಿದೆ ಎಂದು ಅರ್ಜಿದಾರರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದಾರೆ. ಪೊಲೀಸರ ವಿಚಾರಣೆಗೆ ಅರ್ಜಿದಾರರು ಸಹಕರಿಸಬೇಕು. ಹೈಕೋರ್ಟ್ ಅನುಮತಿ ಇಲ್ಲದೆ ದೋಷಾರೋಪಟ್ಟಿ ಸಲ್ಲಿಸುವಂತಿಲ್ಲ. ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಹೈಕೋರ್ಟ್ ಪೀಠದಿಂದ ಮಧ್ಯಂತರ ಆದೇಶ ನೀಡಲಾಗಿದೆ.