ಹಾಸನ: ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾಸನ ತಾಲೂಕಿನ ಮೊಸಳೆ ಗಡಿ ಸಮೀಪ ನಡೆದಿದೆ.
ಹಾಸನ ನಗರದ ಪೆನ್ಷನ್ ಮೊಹಲ್ಲಾ ನಿವಾಸಿ ಹುಸೈಫ್(23), ಹೊಳೆನರಸೀಪುರದ ಗಾಂಧಿನಗರ ನಿವಾಸಿ ಸಮೀರ್(21) ಮೃತಪಟ್ಟವರು ಎಂದು ಹೇಳಲಾಗಿದೆ. ಗಾಯಾಳು ಮೊಹಮ್ಮದ್ ಸೂಫಿಯಾನ್ ನನ್ನು ಬೆಂಗಳೂರು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಗೊರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.