HomeLatest NewsGOOD NEWS: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇರ ನೇಮಕಾತಿಗೆ ಅಧಿಸೂಚನೆ

GOOD NEWS: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇರ ನೇಮಕಾತಿಗೆ ಅಧಿಸೂಚನೆ

ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆಯ ಆಡಳಿತ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇರ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ.

ಕಾಲೇಜು ಶಿಕ್ಷಣ ಇಲಾಖೆಯ ಆಡಳಿತ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಆಯ್ಕೆ ಪ್ರಾಧಿಕಾರವಾದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಸರ್ಕಾರಕ್ಕೆ ಸಲ್ಲಿಸಿದ ಅಂತಿಮ ಆಯ್ಕೆಪಟ್ಟಿಯನ್ನು ಸರ್ಕಾರದ ಅಧಿಸೂಚನೆಯಂತೆ 03.11.2023 ರಲ್ಲಿ ಪ್ರಕಟಿಸಿದೆ.

ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಕಾಲೇಜು ಶಿಕ್ಷಣ ಇಲಾಖೆ) (ಸಹಾಯಕ ಪ್ರಾಧ್ಯಾಪಕರ ನೇಮಕಾತಿ) (ವಿಶೇಷ) ನಿಯಮಗಳು, 2020 ನಿಯಮ 9 ರ ಉಪನಿಯಮ (2) ಮತ್ತು (3) ರನ್ವಯ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅಂತಿಮ ಆಯ್ಕೆ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಅರ್ಹತೆಯ ದೃಢೀಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ವಿಚಾರಣೆಗಳು ಪೂರ್ಣಗೊಂಡಿರುವ ಈ ಕೆಳಕಂಡ ಅಭ್ಯರ್ಥಿಯನ್ನು ವೇತನ ಶ್ರೇಣಿ ರೂ.57700-182400 (ಯುಜಿಸಿ ವೇತನ ಶ್ರೇಣಿ) ರ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇಮಿಸಿ ಆದೇಶಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular