HomeLatest NewsBIG NEWS : 'ಶಾಲಾ ಶಿಕ್ಷಣ ಇಲಾಖೆ'ಯ ಗ್ರೂಪ್ ಸಿ ಮತ್ತು ಡಿ ನೌಕರರ ವರ್ಗಾವಣೆ...

BIG NEWS : ‘ಶಾಲಾ ಶಿಕ್ಷಣ ಇಲಾಖೆ’ಯ ಗ್ರೂಪ್ ಸಿ ಮತ್ತು ಡಿ ನೌಕರರ ವರ್ಗಾವಣೆ : ‘ಶಿಕ್ಷಣ ಇಲಾಖೆ’ಯಿಂದ ಮಹತ್ವದ ಆದೇಶ.!

ಬೆಂಗಳೂರು : ಶಾಲಾ ಶಿಕ್ಷಣ ಇಲಾಖೆಯ ಗ್ರೂಪ್ ಸಿ ಮತ್ತು ಡಿ ನೌಕರರ ವರ್ಗಾವಣೆ ಕುರಿತು-ಕೌನ್ಸಿಲಿಂಗ್ ಮೂಲಕ ಕ್ರಮಕೈಗೊಳ್ಳುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಗ್ರೂಪ್ ಸಿ ಮತ್ತು ಡಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ, ಸರ್ಕಾರದ ಆದೇಶ ಸಂಖ್ಯೆ:ಸಿಆಸುಇ 14 ಸೇನೌವ 2025 ದಿನಾಂಕ:12.05.2025ರ ಮಾರ್ಗಸೂಚಿಗಳನ್ವಯ ಕ್ರಮ ಕೈಗೊಳ್ಳಬೇಕಾಗಿರುತ್ತದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಗ್ರೂಪ್ ಸಿ ಮತ್ತು ಡಿ ನೌಕರರ ವರ್ಗಾವಣೆಯನ್ನು ಪಾರದರ್ಶಕಗೊಳಿಸಲು ಹಾಗೂ ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಪರಿಣಾಮಕಾರಿಯಾಗಿ ನಿರ್ವಹಿಸುವ ಸಲುವಾಗಿ ಹಾಗೂ ಎಲ್ಲರಿಗೂ ಸಮಾನ ಅವಕಾಶ ನೀಡುವ ನಿಟ್ಟಿನಲ್ಲಿ ಇಲಾಖಾ ಮುಖ್ಯಸ್ಥರ ಹಂತದಲ್ಲಿ ಉಲ್ಲೇಖಿತ ಆದೇಶದಲ್ಲಿನ ವರ್ಗಾವಣೆ ಮಾರ್ಗಸೂಚಿಗಳನ್ವಯ ಇಲಾಖೆಯಲ್ಲಿ ಗ್ರೂಪ್ ಸಿ ಮತ್ತು ಡಿ ವೃಂದದ ನೌಕರರ ವರ್ಗಾವಣೆಯನ್ನು ಪಾರದರ್ಶಕವಾಗಿ ಕೌನ್ಸಿಲಿಂಗ್ ಪ್ರಕ್ರಿಯೆ ಮೂಲಕ ನಿರ್ವಹಿಸಲು ಸರ್ಕಾರವು ತೀರ್ಮಾನಿಸಿದೆ. ಗ್ರೂಪ್ ಸಿ ಮತ್ತು ಡಿ ವೃಂದದ ನೌಕರರ ವರ್ಗಾವಣೆ ಮಾಡಲು ಇಲಾಖಾ ಮುಖ್ಯಸ್ಥರು ಸಕ್ಷಮ ಪ್ರಾಧಿಕಾರವಾಗಿರುತ್ತಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವರ್ಗಾವಣೆಯನ್ನು ಕೌನ್ಸಿಲಿಂಗ್ ಪ್ರಕ್ರಿಯ ಮೂಲಕ ನಿರ್ವಹಿಸಲು ಈಗಾಗಲೇ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತಾಲಯ, ಬೆಂಗಳೂರು ಇವರು ತಂತ್ರಾಂಶವನ್ನು ಅಭಿವೃದ್ಧಿಪಡಿಸಿದ್ದು, ಸದರಿ ತಂತ್ರಾಂಶವನ್ನು ಬಳಸಿ ಅಪರ ಆಯುಕ್ತರು, ಕಲಬುರಗಿ ಹಾಗೂ ಅಪರ ಆಯುಕ್ತರು, ಧಾರವಾಡ ಇವರು ಗ್ರೂಪ್ ಸಿ ಮತ್ತು ಡಿ ವೃಂದದ ನೌಕರರ ವರ್ಗಾವಣೆ ಪ್ರಕ್ರಿಯೆಯನ್ನು ಕೈಗೊಳ್ಳತಕ್ಕದ್ದು.

ಮುಂದುವರೆದು, ಶಾಲಾ ಶಿಕ್ಷಣ ಇಲಾಖೆಯ ವ್ಯಾಪ್ತಿಯಡಿ ಬರುವ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ), ಸಾರ್ವಜನಿಕ ಗ್ರಂಥಾಲಯ ಇಲಾಖೆ ಮತ್ತು ಮುದ್ರಣ, ಲೇಖನ ಸಾಮಗ್ರಿ ಮತ್ತು ಪ್ರಕಟಣೆಗಳ ಇಲಾಖೆಯ ಇಲಾಖಾ ಮುಖ್ಯಸ್ಥರುಗಳು ಸಹ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ಆನ್ಲೈನ್ ಮುಖಾಂತರ ಪಾರದರ್ಶಕವಾಗಿ ಕೈಗೊಳ್ಳತಕ್ಕದ್ದು ಎಂದು ತಿಳಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular