HomeLatest NewsGOOD NEWS : ಲ್ಯಾಪ್’ಟಾಪ್, ಸ್ವಯಂ ಉದ್ಯೋಗಕ್ಕೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

GOOD NEWS : ಲ್ಯಾಪ್’ಟಾಪ್, ಸ್ವಯಂ ಉದ್ಯೋಗಕ್ಕೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಬಳ್ಳಾರಿ : ಕುರೇಕುಪ್ಪ ಪುರಸಭೆ ವತಿಯಿಂದ 2025-26 ನೇ ಸಾಲಿನ ಎಸ್ಎಫ್ಸಿ ಮುಕ್ತನಿಧಿ ಯೋಜನೆಯಡಿ ಶೇ.24.10 ಮತ್ತು ಶೇ.7.25 ರಡಿ ಕಾಯ್ದಿರಿಸಿದ ಅನುದಾನದಲ್ಲಿ ವೈಯಕ್ತಿಕ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕುರೆಕುಪ್ಪ ಪುರಸಭೆಯ ಮುಖ್ಯಾಧಿಕಾರಿ ತಿಳಿಸಿದ್ದಾರೆ.

ಸೌಲಭ್ಯದ ವಿವರ:
ಪುರಸಭೆ ಕುರೇಕುಪ್ಪ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಫಲಾನುಭವಿಗಳಿಗೆ ಲ್ಯಾಪ್ಟಾಪ್ ಪಡೆಯಲು, ಸ್ವಯಂ ಉದ್ಯೋಗ ಪ್ರಾರಂಭಿಸಲು ಬ್ಯಾಂಕ್ನಿAದ ಪಡೆಯುವ ಸಾಲಕ್ಕೆ ಬ್ಯಾಕ್ ಎಂಡ್ ಸಬ್ಸಿಡಿ ಸಹಾಯಧನ, ಪ.ಜಾತಿ ಫಲಾನುಭವಿಗಳಿಗೆ ಲ್ಯಾಪ್ಟಾಪ್ ಪಡೆಯಲು(2024-25) ಸಹಾಯಧನ ನೀಡಲಾಗುತ್ತದೆ.

ಪುರಸಭೆ ಕುರೇಕುಪ್ಪ ವ್ಯಾಪ್ತಿಯಲ್ಲಿ ಬರುವ ವಿಶೇಷ ಚೇತನ ಫಲಾನುಭವಿಗಳಿಗೆ ಶ್ರವಣ ಯಂತ್ರ, ವೀಲ್ಚೇರ್, ವಾಕರ್ ಹಾಗೂ ಇತರೆ ಸಾಧನ ಸಲಕರಣೆಗಳ ಖರೀದಿಗಾಗಿ ಸಹಾಯ ಧನ, ಬ್ಯಾಂಕ್ನಿಂದ ಪಡೆಯುವ ಸಾಲಕ್ಕೆ ಬ್ಯಾಕ್ ಎಂಡ್ ಸಬ್ಸಿಡಿ ಸಹಾಯಧನ ನೀಡಲಾಗುತ್ತದೆ.ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಪುರಸಭೆ ಕಚೇರಿಯಿಂದ ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಜೂನ್ 24 ರೊಳಗಾಗಿ ಸಲ್ಲಿಸಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular