ಬೆಂಗಳೂರು : ಕರ್ನಾಟಕದಲ್ಲಿ ‘ಥಗ್ ಲೈಫ್’ ಚಿತ್ರ ಬಿಡುಗಡೆಗೆ ಮಾಡಲ್ಲ ಎಂದು ಚಿತ್ರದ ನಿರ್ಮಾಪಕರು ಹೇಳಿದ್ದು, ಈ ಹಿನ್ನೆಲೆ ಹೈಕೋರ್ಟ್ ವಿಚಾರಣೆಯನ್ನು ಜೂ.10 ಕ್ಕೆ ಮುಂದೂಡಿದೆ.
ಕರ್ನಾಟಕದಲ್ಲಿ ‘ಥಗ್ ಲೈಫ್ ‘ ಸಿನಿಮಾ ಬಿಡುಗಡೆ ಮಾಡುವುದಿಲ್ಲ, ಒಂದು ವಾರ ಕಾಲಾವಕಾಶ ಕೊಡಿ ಎಂದು ಹೈಕೋರ್ಟ್ ಗೆ ‘ಥಗ್ ಲೈಫ್‘ ನಿರ್ಮಾಪಕರ ಪರ ವಕೀಲರು ಹೈಕೋರ್ಟ್ ಗೆ ಮನವಿ ಮಾಡಿದ್ದಾರೆ. ಕರ್ನಾಟಕದಲ್ಲಿ ‘ಥಗ್ ಲೈಫ್’ ಚಿತ್ರ ಬಿಡುಗಡೆಗೆ ಮಾಡಲ್ಲ ಎಂದು ಚಿತ್ರದ ನಿರ್ಮಾಪಕರು ಹೇಳಿದ್ದು, ಈ ಹಿನ್ನೆಲೆ ಹೈಕೋರ್ಟ್ ವಿಚಾರಣೆಯನ್ನು ಜೂ.10 ಕ್ಕೆ ಮುಂದೂಡಿದೆ.
ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ಬಿಡುಗಡೆಗೆ ಅವಕಾಶ ಕೋರಿ ಕಮಲ್ ಹಾಸನ್ ಹೈಕೋರ್ಟ್ ಮೆಟ್ಟಿಲೇರಿದ್ದು, ಹೈಕೋರ್ಟ್ ನಲ್ಲಿ ನ್ಯಾ ಎಂ ನಾಗಪ್ರಸನ್ನ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದೆ. ನಿರ್ಮಾಪಕರ ಪರ ವಕೀಲ ಧ್ಯಾನ್ ಚಿನ್ನಪ್ಪ ಅವರು ವಾದ ಮಂಡಿಸುತ್ತಿದ್ದಾರೆ. ಕರ್ನಾಟಕದಲ್ಲಿ ‘ಥಗ್ ಲೈಫ್ ‘ ಸಿನಿಮಾ ಬಿಡುಗಡೆ ಮಾಡುವುದಿಲ್ಲ, ಒಂದು ವಾರ ಕಾಲಾವಕಾಶ ಕೊಡಿ ಎಂದು ಹೈಕೋರ್ಟ್ ಗೆ ನಿರ್ಮಾಪಕರ ಪರ ವಕೀಲರು ಹೈಕೋರ್ಟ್ ಗೆ ಮನವಿ ಮಾಡಿದ್ದಾರೆ.
ಹೀಗೆಯೇ ಕ್ಷಮೆ ಕೇಳಬೇಕೆಂದು ಹೇಳಲು ಸಾಧ್ಯವಿಲ್ಲ. ಕನ್ನಡದ ಬಗ್ಗೆ ಇರುವ ಭಾಷಾಭಿಮಾನವನ್ನು ಕಮಲ್ ಹಾಸನ್ ಪತ್ರದ ಮೂಲಕ ತಿಳಿಸಿದ್ದಾರೆ. ಕನ್ನಡದ ಬಗ್ಗೆ ಅಸಂಬದ್ಧ ಹೇಳಿಕೆ ನೀಡಿಲ್ಲ ಎಂದರು.
ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ಬಿಡುಗಡೆಗೆ ಅವಕಾಶ ಕೋರಿ ಕಮಲ್ ಹಾಸನ್ ಹೈಕೋರ್ಟ್ ಮೆಟ್ಟಿಲೇರಿದ್ದು, ಹೈಕೋರ್ಟ್ ನಲ್ಲಿ ನ್ಯಾ ಎಂ ನಾಗಪ್ರಸನ್ನ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿದೆ..ಬೇರೆಯವರ ಭಾವನೆಗೆ ಧಕ್ಕೆ ತಂದು ಸಿನಿಮಾ ರಿಲೀಸ್ ಮಾಡಲು ಹೊರಟಿದ್ದೀರಾ..? ನೀವು ಕ್ಷಮೆಯಾಚಿಸಿದರೆ ಸಮಸ್ಯೆಯೇ ಇರಲ್ಲ ಎಂದು ಹೈಕೋರ್ಟ್ ಕಮಲ್ ಹಾಸನ್ ಪರ ವಕೀಲರಿಗೆ ಹೇಳಿದೆ. ನೀವು ಕ್ಷಮೆಯಾಚಿಸದಿದ್ರೆ ಬಿಡಿ..ಕರ್ನಾಟಕದಲ್ಲಿ ಸಿನಿಮಾ ಯಾಕೆ ರಿಲೀಸ್ ಆಗಬೇಕು ಎಂದು ಹೈಕೋರ್ಟ್ ಪ್ರಶ್ನಿಸಿತ್ತು.