HomeLatest NewsBREAKING: ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮ ಅಧ್ಯಕ್ಷರಾಗಿ ಮಾದಾರ ಚೆನ್ನಯ್ಯ ಶ್ರೀ ಅಧಿಕಾರ ಸ್ವೀಕಾರ

BREAKING: ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮ ಅಧ್ಯಕ್ಷರಾಗಿ ಮಾದಾರ ಚೆನ್ನಯ್ಯ ಶ್ರೀ ಅಧಿಕಾರ ಸ್ವೀಕಾರ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮಕ್ಕೆ ನೂತನ ಅಧ್ಯಕ್ಷರಾಗಿ ಬಸವಮೂರ್ತಿ ಮಾದಾರ ಚೆನ್ನಯ್ಯ ಶ್ರೀಗಳನ್ನು ಆಯ್ಕೆ ಮಾಡಲಾಗಿದೆ.

ಯೋಗಗುರು ತಿರುಕ ರಾಘವೇಂದ್ರ ಶ್ರೀಗಳು, ಶ್ರೀ ಸೂರದಾಸ್ ಜೀ, ಮುರುಘಾ ಮಠದ ಶಿವಮೂರ್ತಿ ಶರಣರು ಸೇವಾ ಶ್ರಮದ ಅಧ್ಯಕ್ಷರಾಗಿದ್ದರು. ಮುರುಘಾ ಶರಣರ ವಿರುದ್ಧ ಪೋಕ್ಸೋ ಕೇಸ್ ದಾಖಲಾದ ನಂತರ ಸೇವಾಶ್ರಮದ ಅಧ್ಯಕ್ಷ ಸ್ಥಾನದಿಂದ ವಜಾಗೋಳಿಸಲಾಗಿತ್ತು.

ನಂತರ ಮುರುಘಾಮಠದ ಮಾಜಿ ಆಡಳಿತಾಧಿಕಾರಿ, ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಕಾರ್ಯದರ್ಶಿಯಾಗಿದ್ದರು. ಬಸವರಾಜನ್ ಮತ್ತು ಸಮಿತಿಯಿಂದ ನೂತನ ಅಧ್ಯಕ್ಷರ ಆಯ್ಕೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಲ್ನಾಡಿಹಳ್ಳಿಯಲ್ಲಿ ಮಾದರ ಚೆನ್ನಯ್ಯ ಶ್ರೀಗಳು ಅಧಿಕಾರ ಸ್ವೀಕರಿಸಿದ್ದಾರೆ. ರಾಘವೇಂದ್ರ ಶ್ರೀಗಳು, ಸೂರದಾಸ್ ಶ್ರೀ ಗಳ ಮಾರ್ಗದರ್ಶನದಲ್ಲಿ ಅನಾಥ ಸೇವಾಶ್ರಮ ಮುನ್ನಡೆಸುವ ಭರವಸೆ ನೀಡಿದ್ದಾರೆ. ಶೂನ್ಯ ಅವಸ್ಥೆಯಿಂದ ನಾನು ಪೀಠಕ್ಕೆ ಬಂದವನು. ಆ ಪೀಠ ಕಟ್ಟಿದೆ ಎಂದು ಹೇಳಿದರೆ ಆ ಪೀಠ ನನ್ನದಲ್ಲ, ಅನಾಥ ಸೇವಾಶ್ರಮದ ಅಧ್ಯಕ್ಷ ಸ್ಥಾನದ ಜವಾಬ್ದಾರಿಯೂ ಶಾಶ್ವತವಲ್ಲ. ರಾಘವೇಂದ್ರ ಶ್ರೀ, ಸೂರದಾಸರ ಕೃಪೆ ಇರುವವರೆಗೆ ಅಭಿವೃದ್ದಿಗೆ ಶ್ರಮಿಸೋಣ ಎಂದು ಮಲ್ಲಾಡಿಹಳ್ಳಿಯಲ್ಲಿ ಬಸವಮೂರ್ತಿ ಮಾದಾರ ಚೆನ್ನಯ್ಯ ಶ್ರೀ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular