RCB ಐಪಿಎಲ್ ಟ್ರೋಫಿ ಗೆದ್ದ ಹಿನ್ನೆಲೆ ಇಂದು ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಹೋಳಿಗೆ ಊಟ

ಮೈಸೂರು: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ(RCB) ಪಂಜಾಬ್ ಕಿಂಗ್ಸ್ ತಂಡವನ್ನು ಆರು ರನ್‌ಗಳಿಂದ ಸೋಲಿಸಿ ತಮ್ಮ ಮೊದಲ ಐಪಿಎಲ್ ಪ್ರಶಸ್ತಿಯನ್ನು ಎತ್ತಿಹಿಡಿದಿದೆ.

ಆರ್‌ಸಿಬಿ ಐಪಿಎಲ್ ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ಮೈಸೂರು ನಗರದ ಇಂದಿರಾ ಕ್ಯಾಂಟೀನ್ ನಲ್ಲಿ ಇಂದು ಉಚಿತ ಹೋಳಿಗೆ ಊಟ ನೀಡಲಾಗುವುದು. ಆರ್.ಸಿ.ಬಿ. ಗೆಲುವಿನ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಮೈಸೂರಿನಲ್ಲೂ ಸಂಭ್ರಮಾಚರಣೆ ಜೋರಾಗಿದ್ದು, ಇಂದಿರಾ ಕ್ಯಾಂಟೀನ್ ನಲ್ಲಿ ಹೋಳಿಗೆ ಊಟ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read