ಬೆಂಗಳೂರು : ಆರ್ ಸಿಬಿ ಟ್ರೋಫಿ ಗೆದ್ದಿದ್ದಕ್ಕೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸಂಭ್ರಮಾಚರಣೆ ಮನೆ ಮಾಡಿದೆ. ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಅಭಿಮಾನಿಗಳು ಕುಣಿದು ಕುಪ್ಪಳಿಸಿ ವಿಜಯೋತ್ಸವ ಆಚರಿಸಿದ್ದಾರೆ.
18 ವರ್ಷದ ಆರ್ ಸಿಬಿ ಕನಸು ನನಸಾಗಿದ್ದು, ರಾಜ್ಯದ ಹಲವು ಕಡೆ ಅಭಿಮಾನಿಗಳು ಪಟಾಕಿ ಸಿಡಿಸಿ ಕುಣಿದು ಕುಪ್ಪಳಿಸಿ ಸಂಭ್ರಮಿಸಿದ್ದಾರೆ. ಇಂದು ಮಧ್ಯಾಹ್ನ 1:30 ಕ್ಕೆ ಆರ್ ಸಿಬಿ ಆಟಗಾರರು ಬೆಂಗಳೂರಿಗೆ ಆಗಮಿಸಲಿದ್ದು, ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ನಂತರ ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣದವರೆಗೆ ವಿಜಯೋತ್ಸವ ರ್ಯಾಲಿ ನಡೆಯಲಿದೆ.

