ಅಮಿತಾಬ್-ಜಯಾ ದಾಂಪತ್ಯಕ್ಕೆ 52ರ ಸಂಭ್ರಮ: ಹಳೆ ಮದುವೆ ಫೋಟೋಗಳೊಂದಿಗೆ ಧನ್ಯವಾದ ಹೇಳಿದ ದಂಪತಿ !

ಬಾಲಿವುಡ್‌ನ ಮೆಚ್ಚಿನ ತಾರಾ ದಂಪತಿ ಅಮಿತಾಬ್ ಬಚ್ಚನ್ ಮತ್ತು ಜಯಾ ಬಚ್ಚನ್ ಜೂನ್ 3 ರಂದು ತಮ್ಮ 52ನೇ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿದ್ದಾರೆ.

ಈ ವಿಶೇಷ ಸಂದರ್ಭದಲ್ಲಿ, ಹಿರಿಯ ನಟ ಅಮಿತಾಬ್ ಬಚ್ಚನ್, ತಮ್ಮ ‘ಎಕ್ಸ್’ (ಹಿಂದಿನ ಟ್ವಿಟರ್) ಖಾತೆಯಲ್ಲಿ ಪತ್ನಿ ಜಯಾ ಅವರೊಂದಿಗಿನ ಹಳೆಯ ಮದುವೆ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಮತ್ತು ಹಿತೈಷಿಗಳು ನೀಡಿರುವ ಶುಭಾಶಯಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಅಮಿತಾಬ್ ಹಂಚಿಕೊಂಡಿರುವ ಫೋಟೋಗಳಲ್ಲಿ, ಯುವ ಅಮಿತಾಬ್ ಬಿಳಿ ಬಣ್ಣದ ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದರೆ, ಜಯಾ ಕೆಂಪು ಸೀರೆಯಲ್ಲಿ ಮಿಂಚಿದ್ದಾರೆ.

“ನಮ್ಮ ವಿವಾಹ ವಾರ್ಷಿಕೋತ್ಸವದ ಶುಭಾಶಯಗಳನ್ನು ಕೋರಿದ ಎಲ್ಲರಿಗೂ ನನ್ನ ಕೃತಜ್ಞತೆಗಳು ಮತ್ತು ಪ್ರೀತಿ! ಎಲ್ಲರಿಗೂ ವೈಯಕ್ತಿಕವಾಗಿ ಉತ್ತರ ನೀಡಲು ಸಾಧ್ಯವಾಗುತ್ತಿಲ್ಲ, ಕ್ಷಮಿಸಿ” ಎಂದು ಅಮಿತಾಬ್ ಬಚ್ಚನ್ ಬರೆದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read