ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಆರ್ ಸಿ ಬಿ ವಿಜಯೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ಈ ವೇಳೆ ಕಾಲ್ತುಳಿತ ಉಂಟಾಗಿದೆ. ಪರಿಣಾಮ ಓರ್ವ ಮಹಿಳೆ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಐಪಿಎಲ್ ಕಪ್ ಗೆದ್ದಿರುವ ರಾಯಲ್ ಚಾಲೇಂಜರ್ಸ್ ಬೆಂಗಳೂರು ಕಪ್ ಹಿಡಿದು ಬೆಂಗಳೂರಿಗೆ ಆಗಮಿಸಿದೆ. ವಿರಾಟ್ ಕೊಹ್ಲಿ ನೇತೃತ್ವದಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿಗೆ ಬಂದ ಆರ್ ಸಿಬಿ ಆಟಗಾರರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು.
ಅಹಮದಾಬಾದ್ ನಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಆರ್ ಸಿಬಿ ಆಟಗಾರರನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಆತ್ಮೀಯವಾಗಿ ಸ್ವಾಗತಿಸಿದರು. ವಿರಾಟ್ ಕೊಹ್ಲಿಗೆ ಕನ್ನಡದ ಬಾವುಟ ಹಾಗೂ ಆರ್ ಸಿಬಿ ಧ್ವಜವನ್ನು ನೀಡಿ ಸ್ವಾಗತ ಕೋರಿದರು.

