HomeLatest NewsBIG NEWS: ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಬಾಂಬ್ ಬೆದರಿಕೆ

BIG NEWS: ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಬಾಂಬ್ ಬೆದರಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ದೇರಳಕಟ್ಟೆಯ ಕಣಚೂರು ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ.

ಆಸ್ಪತ್ರೆಯ ಪ್ರಸವ ಕೊಠಡಿಯ ಫೋನ್ ಗೆ ದೂರವಾಣಿ ಕರೆಯೊಂದು ಬಂದಿದ್ದು, ಬೆಳಿಗ್ಗೆ 11 ಗಂಟೆಗೆ ಆಸ್ಪತ್ರೆಯಲ್ಲಿ ಬಾಂಬ್ ಬ್ಲಾಸ್ಟ್ ಆಗಲಿದೆ. ಎಲ್ಲರನ್ನೂ ಆಸ್ಪತ್ರೆಯಿಂದ ಹೊರ ಕಳುಹಿಸಿ ಎಂದು ಬೆದರಿಕೆ ಹಾಕಿದ್ದರು. ಈ ಬಗ್ಗೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಆಗಮಿಸಿ ಆಸ್ಪತ್ರೆ ಹಾಗೂ ಕಾಲೇಜನ್ನು ಸಂಪೂರ್ಣವಾಗಿ ಪರಿಶೀಲನೆ ನಡೆಸಿದೆ. ಬಳಿಕ ಇದೊಂದು ಹುಸಿಬಾಂಬ್ ಕರೆ ಎಂಬುದನ್ನು ಪೊಲೀಸರು ದೃಢಪಡಿಸಿದ್ದಾರೆ.

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular