HomeLatest NewsBREAKING: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ: ಮತ್ತಿಬ್ಬರು RCB ಅಭಿಮಾನಿಗಳು ಸಾವು: ಮೃತರ ಸಂಖ್ಯೆ 4ಕ್ಕೇರಿಕೆ

BREAKING: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ: ಮತ್ತಿಬ್ಬರು RCB ಅಭಿಮಾನಿಗಳು ಸಾವು: ಮೃತರ ಸಂಖ್ಯೆ 4ಕ್ಕೇರಿಕೆ

ಬೆಂಗಳೂರು: ಆರ್ ಸಿಬಿ ತಂಡ ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂಗೆ ಬಂದಿದ್ದ ಮತ್ತಿಬ್ಬರು ಆರ್ ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.

ಚಿನ್ನಸ್ವಾಮಿ ಸ್ಟೇಡಿಯಂಬಳಿ ಜನಸಾಗರವೇ ನೆರೆದಿದ್ದು, ಅಭಿಮಾನಿಗಳು ಬ್ಯಾರಿಕೇಡ್ ಗಳನ್ನು ತಳ್ಳಿ, ಗೇಟ್ ಗಳನ್ನು ಮುರಿದು ಪ್ರವಾಹದಂತೆ ಸ್ಟೇಡಿಯಂ ಒಳನುಗ್ಗಿದ್ದಾರೆ. ಈ ವೇಳೆ ಸ್ಥಳದಲ್ಲಿ ಭಾರಿ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಆರ್ ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೂಕುನುಗ್ಗಲು, ಕಾಲ್ತುಳಿದತದಲ್ಲಿ 15 ಜನರು ಗಾಯಗೊಂಡು ಅಸ್ವಸ್ಥರಾಗಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿತ್ತು. ಅವರನ್ನು ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಬ್ಬರೂ ಸಾವನ್ನಪ್ಪಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಹಲವು ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular