HomeLatest Newsಸಮಾಜಮುಖಿ ಕಾರ್ಯಕ್ಕೆ ಗೃಹಲಕ್ಷ್ಮಿ ಹಣ ಬಳಕೆ: 4 ಕಿ.ಮೀ. ಉದ್ದದ ಮುಳ್ಳುಕಂಟಿ ತೆಗೆಸಿದ ರೈತ ಮಹಿಳೆ

ಸಮಾಜಮುಖಿ ಕಾರ್ಯಕ್ಕೆ ಗೃಹಲಕ್ಷ್ಮಿ ಹಣ ಬಳಕೆ: 4 ಕಿ.ಮೀ. ಉದ್ದದ ಮುಳ್ಳುಕಂಟಿ ತೆಗೆಸಿದ ರೈತ ಮಹಿಳೆ

ನಾಡಿನ ಪ್ರತಿಯೊಬ್ಬ ಮಹಿಳೆಯೂ ಕೂಡ ಆರ್ಥಿಕ ಸಂಕಷ್ಟಗಳಿಂದ ಹೊರಬಂದು ಸುಖ ಸಂತೋಷದಿಂದ ಜೀವನ ಸಾಗಿಸುವಂತಾಗಬೇಕು ಎಂಬ ರಾಜ್ಯ ಸರ್ಕಾರದ ಉದ್ದೇಶವನ್ನು ಗೃಹಲಕ್ಷ್ಮಿ ಯೋಜನೆಯು ಈಡೇರಿಸುತ್ತಿದೆ. ಮತ್ತೊಂದೆಡೆ ಅನೇಕ ಗೃಹಿಣಿಯರು ತಮಗೆ ಬಂದ ಗೃಹಲಕ್ಷ್ಮಿ ಹಣವನ್ನು ಸಾಮಾಜಿಕ ಕಾರ್ಯಗಳಿಗೆ ವಿನಿಯೋಗಿಸುತ್ತಿರುವುದು ಗಮನಾರ್ಹ ಸಂಗತಿ.

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಯರೇಹಂಚಿನಾಳ ಗ್ರಾಮದಿಂದ ಕೊಟುಮಚಗಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ 4 ಕಿ.ಮೀ. ಉದ್ದದ ರಸ್ತೆ ಬದಿ ಬೆಳೆದು ನಿಂತಿದ್ದ ಮುಳ್ಳು ಕಂಟಿಯನ್ನು ರೈತ ಮಹಿಳೆ ಸವಿತಾ ಉಮೇಶ ನಾಗರೆಡ್ಡಿ ಅವರು ಗೃಹಲಕ್ಷ್ಮಿ ಹಣದಿಂದ ಸ್ವಚ್ಛಗೊಳಿಸಿದ್ದಾರೆ.

‘ಹೊಲಗಳಿಗೆ ಹೋಗುವ ರಸ್ತೆ ಬಹಳ ಕಿರಿದಾಗಿತ್ತು. ಇದರಿಂದ ರೈತರಿಗೆ ಬಹಳ ತೊಂದರೆಯಾಗುತ್ತಿತ್ತು. ಹೀಗಾಗಿ ‘ಗೃಹಲಕ್ಷ್ಮಿ’ ಯೋಜನೆಯ 22 ಸಾವಿರ ರೂ. ಹಣದಿಂದ ಜೆಸಿಬಿ ಬಳಸಿ ಮುಳ್ಳು ಜಾಲಿಯನ್ನು ಸ್ವಚ್ಛಗೊಳಿಸಿದ್ದೇನೆ ಎಂದು ಸವಿತಾ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular