ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಲಿದೆ.
ಪ್ರಕರಣದ ಕುರಿತು ಆಮ್ ಆದ್ಮಿ ಪಕ್ಷದ ಕರ್ನಾಟಕ ವಿಭಾಗದ ಯುವ ಅಧ್ಯಕ್ಷ ವಕೀಲ ಲೋಹಿತ್ ಹನುಮಪುರ ಗುರುವಾರ ಹೈಕೋರ್ಟ್ ಗೆ (ಪಿಐಎಲ್ ) ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಿದ್ದಾರೆ.
ಘಟನೆಗೆ ಕಾರಣವಾಗಿರುವ ತಪ್ಪಿತಸ್ಥ ಅಧಿಕಾರಿಗಳು, ಖಾಸಗಿ ಸಂಸ್ಥೆಯ ಅಧಿಕಾರಿಗಳು-ಸಿಬ್ಬಂದಿ ವಿರುದ್ಧ ಕ್ರಮ ಜರುಗಿಸಬೇಕೆಂದು ಅರ್ಜಿ ಸಲ್ಲಿಸಲಿದ್ದಾರೆ. ಹಾಗೂ ಕಾರ್ಯಕ್ರಮ ಆಚರಣೆಗೆ ಸರ್ಕಾರ ನೀಡಿರುವ ಅನುಮತಿಗಳು, ಕೈಗೊಂಡಿರುವ ಸುರಕ್ಷತಾ ಕ್ರಮಗಳ ಕುರಿತು ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಲೋಹಿತ್ ಕೋರಲಿದ್ದಾರೆ.
You Might Also Like
TAGGED:ಚಿನ್ನಸ್ವಾಮಿ ಸ್ಟೇಡಿಯಂ