HomeLatest NewsBREAKING : ಬೆಂಗಳೂರಿನಲ್ಲಿ ಕಾಲ್ತುಳಿತ ದುರಂತ : ಕುಟುಂಬಸ್ಥರಿಗೆ 11 ಜನರ ಮೃತದೇಹ ಹಸ್ತಾಂತರ.!

BREAKING : ಬೆಂಗಳೂರಿನಲ್ಲಿ ಕಾಲ್ತುಳಿತ ದುರಂತ : ಕುಟುಂಬಸ್ಥರಿಗೆ 11 ಜನರ ಮೃತದೇಹ ಹಸ್ತಾಂತರ.!

ಬೆಂಗಳೂರು : ಬೆಂಗಳೂರಿನಲ್ಲಿ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಕುಟುಂಬಸ್ಥರಿಗೆ 11 ಜನರ ಮೃತದೇಹಗಳ ಹಸ್ತಾಂತರ ಮಾಡಲಾಗಿದೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ 5 ಮಂದಿ ಹಾಗೂ ಬೌರಿಂಗ್ ಆಸ್ಪತ್ರೆಯಲ್ಲಿ 6 ಜನರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದ್ದು, ಕುಟುಂಬಸ್ಥರಿಗೆ 11 ಜನರ ಮೃತದೇಹಗಳ ಹಸ್ತಾಂತರ ಮಾಡಲಾಗಿದೆ.

ಮೃತಪಟ್ಟವರ ಕುಟುಂಬದವರಿಗೆ ರೂ.10 ಲಕ್ಷ ಪರಿಹಾರ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ದುರಂತ ಸಂಭವಿಸಿದೆ. ಇಲ್ಲಿ ಕಾಲ್ತುಳಿತಕ್ಕೆ ಒಳಗಾಗಿ 11ಜನರು ಮೃತಪಟ್ಟು, 47 ಮಂದಿ ಗಾಯಗೊಂಡಿದ್ದಾರೆ. •ನಾನು ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ್ದೇನೆ, ತಮ್ಮವರನ್ನು ಕಳೆದುಕೊಂಡವರನ್ನು ಸಂತೈಸಿದ್ದೇನೆ. ಸಂಭ್ರಮಾಚರಣೆ ಮಾಡುವಾಗ ಇಂತಹ ದುರಂತ ನಡೆಯಬಾರದಾಗಿತ್ತು. ಈ ಘಟನೆಯ ಬಗ್ಗೆ ನಮಗೆ ಮರುಕವಿದೆ.

•ಸಾವಿಗೀಡಾದವರಲ್ಲಿ ಹೆಚ್ಚಿನವರು ಯುವ ವಯಸ್ಸಿನವರು. ನಾವು ಮೃತಪಟ್ಟವರ ಕುಟುಂಬದವರಿಗೆ ರೂ.10 ಲಕ್ಷ ಪರಿಹಾರ ನೀಡಲಿದ್ದೇವೆ. ಗಾಯಗೊಂಡವರ ಚಿಕಿತ್ಸೆ ವೆಚ್ಚವನ್ನು ಸರ್ಕಾರ ಭರಿಸಲಿದೆ. ಗಾಯಗೊಂಡವರು ಪ್ರಾಣಾಪಾಯಾದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. •ಈ ದುರಂತದ ಬಗ್ಗೆ ಮ್ಯಾಜಿಸ್ಟ್ರೀಯಲ್ ತನಿಖೆಗೆ ಆದೇಶಿಸಿದ್ದೇನೆ. ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು. 15ದಿನಗಳ ಒಳಗಾಗಿ ತನಿಖೆಯ ವರದಿಯನ್ನು ಸಲ್ಲಿಸಲು ಸೂಚನೆ ನೀಡಲಾಗಿದೆ. •ನಿನ್ನೆ ತಡರಾತ್ರಿವರೆಗೂ ಐಪಿಎಲ್ ಫೈನಲ್ ಪಂದ್ಯ ನಡೆದಿತ್ತು. ಕ್ರಿಕೆಟ್ ಅಸೋಸಿಯೇಶನ್ ಅವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಸರ್ಕಾರದ ವತಿಯಿಂದ ವಿಧಾನಸೌಧದ ಬಳಿ ಕಾರ್ಯಕ್ರಮ ಆಯೋಜಿಸಲಾಗಿತ್ತು. •ನಮ್ಮ ನಿರೀಕ್ಷೆಗೂ ಮೀರಿ ಜನ, ಅಭಿಮಾನಿಗಳು ಸೇರಿದ್ದರು. ವಿಧಾನಸೌಧ ಎದುರು ಸುಮಾರು 1ಲಕ್ಷಕ್ಕೂ ಹೆಚ್ಚು ಜನ ಸೇರಿದ್ದರು. ಆದರೂ ಸರ್ಕಾರ ಆಯೋಜಿಸಿದ್ದ ಸಮಾರಂಭದಲ್ಲಿ ಯಾವುದೇ ಅನಿರೀಕ್ಷಿತ ಘಟನೆಗಳು, ದುರಂತ ನಡೆದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular