HomeLatest Newsಮಿಲಿಟರಿ ಬಾಲಕಿಯರ ವಸತಿ ನಿಲಯದ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಮಿಲಿಟರಿ ಬಾಲಕಿಯರ ವಸತಿ ನಿಲಯದ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಧಾರವಾಡ : ಧಾರವಾಡ ಶಹರದ ಸಪ್ತಾಪೂರ ರಸ್ತೆಯಲ್ಲಿರುವ ಮಿಲಿಟರಿ ಬಾಲಕಿಯರ ವಸತಿ ನಿಲಯದಲ್ಲಿ 2025-26ನೇ ಸಾಲಿಗೆ ಧಾರವಾಡ, ಗದಗ, ಹಾವೇರಿ, ಮತ್ತು ಬಳ್ಳಾರಿ ಜಿಲ್ಲೆಗಳ ಗ್ರಾಮಾಂತರ ಪ್ರದೇಶ, ಹಾಗೂ ರಾಜ್ಯದ ಇತರ ಜಿಲ್ಲೆಗಳಲ್ಲಿರುವ ಯುದ್ದದಲ್ಲಿ ಮಡಿದ ಯೋಧರ ಮತ್ತು ಮಾಜಿ ಸೈನಿಕರ ಹೆಣ್ಣು ಮಕ್ಕಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ 5 ನೇ ತರಗತಿಯಿಂದ ಪಿಯುಸಿ-2 ರ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುತ್ತದೆ. ವಸತಿ ನಿಲಯದಲ್ಲಿ ವಾಸ್ತವ್ಯ ಮತ್ತು ಊಟೋಪಚಾರಗಳು ಉಚಿತವಾಗಿದ್ದು, ಮಾಜಿ ಸೈನಿಕರ ಹೆಣ್ಣು ಮಕ್ಕಳು ಈ ಸೌಲಭ್ಯದ ಉಪಯೋಗ ಪಡೆಯಬಹುದಾಗಿರುತ್ತದೆ. ವಸತಿ ನಿಲಯದಲ್ಲಿ ಧಾರವಾಡ ನಗರದಲ್ಲಿರುವ ವಿದ್ಯಾ ಸಂಸ್ಥೆಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿನಿಯರಿಗೆ ಮಾತ್ರ ನಿಲಯದಲ್ಲಿ ಪ್ರವೇಶ ನೀಡಲಾಗುವದು.

ಆಸಕ್ತ ವಿದ್ಯಾರ್ಥಿಗಳು ಜೂನ್ 15, 2025 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ:0836-2440176 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular