HomeLatest NewsRain Alert Karnataka: ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ :...

Rain Alert Karnataka: ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ : ‘ಹವಾಮಾನ ಇಲಾಖೆ’ ಮುನ್ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಮಳೆ ಚುರುಕಾಗಲಿದ್ದು, 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬೆಳಗಾವಿ, ಬೀದರ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular