HomeLatest NewsBREAKING : ಬೆಂಗಳೂರಿನ 'ಚಿನ್ನಸ್ವಾಮಿ ಸ್ಟೇಡಿಯಂ'ನಲ್ಲಿ ಕಾಲ್ತುಳಿತ ದುರಂತ : ಹೈಕೋರ್ಟ್ ನಿಂದ ಸ್ವಯಂಪ್ರೇರಿತ 'PIL'...

BREAKING : ಬೆಂಗಳೂರಿನ ‘ಚಿನ್ನಸ್ವಾಮಿ ಸ್ಟೇಡಿಯಂ’ನಲ್ಲಿ ಕಾಲ್ತುಳಿತ ದುರಂತ : ಹೈಕೋರ್ಟ್ ನಿಂದ ಸ್ವಯಂಪ್ರೇರಿತ ‘PIL’ ದಾಖಲು.!

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಗೆ ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸಿಕೊಂಡಿದೆ. ಘಟನೆ ಬಗ್ಗೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಹಾಗೂ ವಿಚಾರಣೆಯನ್ನು ಇಂದು ಮಧ್ಯಾಹ್ನ 2 :30 ಕ್ಕೆ ನಿಗದಿಪಡಿಸಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ದುರಂತ ಸಂಭವಿಸಿದೆ. ಇಲ್ಲಿ ಕಾಲ್ತುಳಿತಕ್ಕೆ ಒಳಗಾಗಿ 11ಜನರು ಮೃತಪಟ್ಟು, 47 ಮಂದಿ ಗಾಯಗೊಂಡಿದ್ದಾರೆ.

ಸಾವಿಗೀಡಾದವರಲ್ಲಿ ಹೆಚ್ಚಿನವರು ಯುವ ವಯಸ್ಸಿನವರು. ನಾವು ಮೃತಪಟ್ಟವರ ಕುಟುಂಬದವರಿಗೆ ರೂ.10 ಲಕ್ಷ ಪರಿಹಾರ ನೀಡಲಿದ್ದೇವೆ. ಗಾಯಗೊಂಡವರ ಚಿಕಿತ್ಸೆ ವೆಚ್ಚವನ್ನು ಸರ್ಕಾರ ಭರಿಸಲಿದೆ. ಗಾಯಗೊಂಡವರು ಪ್ರಾಣಾಪಾಯಾದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.ಈ ದುರಂತದ ಬಗ್ಗೆ ಮ್ಯಾಜಿಸ್ಟ್ರೀಯಲ್ ತನಿಖೆಗೆ ಆದೇಶಿಸಿದ್ದೇನೆ. ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು. 15ದಿನಗಳ ಒಳಗಾಗಿ ತನಿಖೆಯ ವರದಿಯನ್ನು ಸಲ್ಲಿಸಲು ಸೂಚನೆ ನೀಡಲಾಗಿದೆ. ನಿನ್ನೆ ತಡರಾತ್ರಿವರೆಗೂ ಐಪಿಎಲ್ ಫೈನಲ್ ಪಂದ್ಯ ನಡೆದಿತ್ತು. ಕ್ರಿಕೆಟ್ ಅಸೋಸಿಯೇಶನ್ ಅವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಸರ್ಕಾರದ ವತಿಯಿಂದ ವಿಧಾನಸೌಧದ ಬಳಿ ಕಾರ್ಯಕ್ರಮ ಆಯೋಜಿಸಲಾಗಿತ್ತು ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಮ್ಮ ನಿರೀಕ್ಷೆಗೂ ಮೀರಿ ಜನ, ಅಭಿಮಾನಿಗಳು ಸೇರಿದ್ದರು. ವಿಧಾನಸೌಧ ಎದುರು ಸುಮಾರು 1ಲಕ್ಷಕ್ಕೂ ಹೆಚ್ಚು ಜನ ಸೇರಿದ್ದರು. ಆದರೂ ಸರ್ಕಾರ ಆಯೋಜಿಸಿದ್ದ ಸಮಾರಂಭದಲ್ಲಿ ಯಾವುದೇ ಅನಿರೀಕ್ಷಿತ ಘಟನೆಗಳು, ದುರಂತ ನಡೆದಿಲ್ಲ ಆಯೋಜಿಸಲಾಗಿತ್ತು ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular