HomeLatest NewsGOOD NEWS : ರಾಜ್ಯ ಸರ್ಕಾರದಿಂದ ಅಲೆಮಾರಿ, ಅರೆ ಅಲೆಮಾರಿ ಸಮುದಾಯಕ್ಕೆ ಗುಡ್ ನ್ಯೂಸ್ :...

GOOD NEWS : ರಾಜ್ಯ ಸರ್ಕಾರದಿಂದ ಅಲೆಮಾರಿ, ಅರೆ ಅಲೆಮಾರಿ ಸಮುದಾಯಕ್ಕೆ ಗುಡ್ ನ್ಯೂಸ್ : ಸಹಾಯಧನ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಹಾಯಧನ ಮತ್ತು ಸಾಲ-ಸೌಲಭ್ಯಕ್ಕಾಗಿ ಅರ್ಹರಿಂದ ಆನ್ಲೈನ್ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಯೋಜನೆಗಳು:

ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರö್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗಳಡಿ ಸಹಾಯಧನ ಮತ್ತು ಸಾಲ-ಸೌಲಭ್ಯ ನೀಡಲಾಗುವುದು.
ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. 2023-24 ಮತ್ತು 2024-25ನೇ ಸಾಲಿನಲ್ಲಿ ಅರ್ಜಿಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಮೇಲ್ಕಂಡ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಪ್ರವರ್ಗ-1ರ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಕ್ಕೆ ಸೇರಿದವರಾಗಿರಬೇಕು.ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನ ಕಚೇರಿಯ ಎರಡನೇ ಮಹಡಿಯ ಬಿ ಬ್ಲಾಕ್ ನ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಕಚೇರಿ ಅಥವಾ ಸಹಾಯವಾಣಿ ಸಂಖ್ಯೆ:08392-267038 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಟಿ.ಹೊನ್ನುರಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular