HomeLatest NewsBIG NEWS: ಕ್ರಿಕೆಟ್ ಇತಿಹಾಸದಲ್ಲಿಯೇ ಇಂತಹ ದುರಂತ ಸಂಭವಿಸಿರಲಿಲ್ಲ: ಕಂಬನಿ ಮಿಡಿದ ಗೃಹ ಸಚಿವ ಪರಮೇಶ್ವರ್

BIG NEWS: ಕ್ರಿಕೆಟ್ ಇತಿಹಾಸದಲ್ಲಿಯೇ ಇಂತಹ ದುರಂತ ಸಂಭವಿಸಿರಲಿಲ್ಲ: ಕಂಬನಿ ಮಿಡಿದ ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದಾರೆ. ಹಲವರ ಸ್ಥಿತಿ ಗಂಭೀರವಾಗಿದೆ. ಕ್ರಿಕೆಟ್ ಇತಿಹಾಸದಲ್ಲಿಯೇ ಇಂತಹ ದುರಂತ ಸಂಭವಿಸಿರಲಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರೊನಲ್ಲಿ ಸುದ್ದಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಸಾವನ್ನಪ್ಪಿದವರ ಆತ್ಮಕ್ಕೆ ಶಾಂತಿ ಸಿಗಲಿ, ಮೃತರ ಕುಟುಂಬಕ್ಕೆ ದು:ಖ ತಡೆದುಕೊಳ್ಳುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

ಕ್ರಿಕೆಟ್ ಇತಿಹಾಸದಲ್ಲಿಯೇ ಇಂತಹ ಘಟನೆ ನಡೆದಿರಲಿಲ್ಲ. ದುರಂತದಿಂದ ಬಹಳ ದು:ಖವಾಗಿದೆ. ಘಟನೆಯಲ್ಲಿ 11 ಜನರು ಸಾವನ್ನಪ್ಪಿದ್ದಾರೆ 56 ಜನರು ಗಾಯಗೊಂಡಿದ್ದಾರೆ. 46 ಗಾಯಾಳುಗಳು ಡಿಸ್ಚಾರ್ಜ್ ಆಗಿದ್ದಾರೆ. 10 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂದೆ ಇಂತಹ ವಿಜಯೋತ್ಸವ ನಡೆಯುವ ವೇಳೆ ಪೊಲೀಸ್ ನಿರ್ದೇಶನಗಳ ಚೌಕಟ್ಟಿನಲ್ಲಿಯೇ ಮಾಡುತ್ತೇವೆ. ಇದಕ್ಕಾಗಿ ಹೊಸ ಎಸ್ ಒಪಿ ಮಾಡುತ್ತೇವೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಗುವುದು ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular