HomeLatest NewsBIG NEWS: ಇದೊಂದು ಸರ್ಕಾರಿ ಪ್ರಾಯೋಜಿತ ಹತ್ಯಾಕಾಂಡ: ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ

BIG NEWS: ಇದೊಂದು ಸರ್ಕಾರಿ ಪ್ರಾಯೋಜಿತ ಹತ್ಯಾಕಾಂಡ: ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ

ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ ಘಟನೆ ಇದು ಸರ್ಕಾರಿ ಪ್ರಾಯೋಜಿತ ಹತ್ಯಾಕಾಂಡ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಆರ್.ಅಶೋಕ್, ನೂರು ಮೀಟರ್ ಅಂತರದಲ್ಲಿ ಎರಡು ಕಾರ್ಯಕ್ರಮ ಮಾಡುವ ಅಗತ್ಯವೇನಿತ್ತು? ಆರ್ ಸಿಬಿ ತಂಡದ ಮಾಲೀಕರು ಕರ್ನಾಟಕದವರಲ್ಲ, ಕನ್ನಡಿಗರೂ ಅಲ್ಲ ಹೀಗಿರುವಾಗ ಇಂತಹ ವಿಜಯೋತ್ಸವ ಕಾರ್ಯಕ್ರಮ ಮಾಡುವ ಅವಶ್ಯಕತೆ ಏನಿತ್ತು? ರಾಜಕೀಯ ಪ್ರಚಾರಕ್ಕಾಗಿ ಪೊಲೀಸರ ಅನುಮತಿಯನ್ನೂ ಪಡೆಯದೆ ಕಾರ್ಯಕ್ರಮಗಳನ್ನು ನಡೆಸಿ ದುರಂತಕ್ಕೆ ಕಾರಣರಾಗಿದ್ದಾರೆ. ಇದೊಂದು ಸರ್ಕಾರಿ ಪ್ರಾಯೋಜಿತ ಹತ್ಯಾಕಾಂಡ ಎಂದು ಕೆಂಡಕಾರಿದರು.

ನಮಗೂ ಈ ದುರಂತಕ್ಕೂ ಸಂಬಂಧವಿಲ್ಲ, ನಮ್ಮದು ತಪ್ಪಿಲ್ಲ ಎಂದು ಕೆ ಎಸ್ ಸಿಎ ಹೇಳಿದೆ. ಆಟಗಾರರನ್ನು ವಿಧಾನಸೌಧಕ್ಕೆ ಕರೆತಂದ ಪುಣ್ಯಾತ್ಮ ಯಾರು? ಅವನ ಹೆಸರು ಸುವರ್ಣಾಕ್ಷರದಲ್ಲಿ ಬರೆದಿಡಬೇಕಲ್ಲವೇ? ಎಂದು ಕಿಡಿಕಾರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನನಗಿರುವ ಮಾಹಿತಿ ಪ್ರಕಾರ ಕಾರ್ಯಕ್ರಮಕ್ಕೆ ಪೊಲೀಸರು ನಿರಾಕರಿಸಿದ್ದರು. ಹೈಕೋರ್ಟ್ ನಿರ್ಬಂಧಿತ ವಲಯದಲ್ಲಿ ಡ್ರೋಣ್ ಬಳಕೆ ಮಾಡಿದ್ದಾರೆ. ಕೋರ್ಟ್ ಕಟ್ತಡದ ಮೇಲೆ ಕೂಡ ಹತ್ತಿದ್ದಾರೆ. ಬಿಟ್ಟವರು ಯಾರು? ತಪ್ಪನ್ನು ಬೇರೆಯವರ ಮೇಲೆ ಹಾಕಲು ನಿನ್ನೆ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿದರು. ಎಷ್ಟು ಹೊತ್ತಿಗೆ ಒಳಗೆ ಬಿಡಬೇಕು ಎಂಬ ಬಗ್ಗೆ ಯಾವುದೇ ನಿರ್ದೇಶನ ಇಲ್ಲ. ಕಾರ್ಯಕ್ರಮದ ಆಯೋಜಕರು ಯಾರೆಂದೇ ಗೊತ್ತಿಲ್ಲ ಎಂದು ಪೊಲಿಸರು ಹೇಳುತ್ತಾರೆ. ಇದೆಲ್ಲವೂ ಸರ್ಕಾರದ ಬೇಜವಾಬ್ದಾರಿತನವನ್ನು ತೋರಿಸುತ್ತದೆ ಎಂದು ವಾಗ್ದಾಳಿ ನಡೆಸಿದರು.

For Latest News Updates, Join Our Whatsapp Community🚩
RELATED ARTICLES

Most Popular