HomeLatest Newsರಾಜ್ಯ ಸರ್ಕಾರದಿಂದ 'ಸವಿತಾ ಸಮಾಜ'ದ ಸಮುದಾಯಕ್ಕೆ ಗುಡ್ ನ್ಯೂಸ್ :  ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ...

ರಾಜ್ಯ ಸರ್ಕಾರದಿಂದ ‘ಸವಿತಾ ಸಮಾಜ’ದ ಸಮುದಾಯಕ್ಕೆ ಗುಡ್ ನ್ಯೂಸ್ :  ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ಸವಿತಾ ಸಮಾಜದ ಅಭಿವೃದ್ಧಿ ನಿಗಮದಿಂದ ಸಾಲಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳಿಗೆ ಸೇರಿದ ಸವಿತಾ ಸಮಾಜ ಮತ್ತು ಅದರ ಉಪಜಾತಿಗಳಿಗೆ ಸೇರಿದ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ) ಸಮುದಾಯಗಳ ಆಸಕ್ತರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ಈ ಮೇಲಿನ ಎಲ್ಲಾ ಯೋಜನೆಗಳ ಸೌಲಭ್ಯವನ್ನು ಪಡೆಯಲು ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು ಮತ್ತು ಇತರೆ ದಾಖಾಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದೂ ಹೊಂದಾಣಿಕೆಯಾಗಬೇಕು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ. 2023-24 ಮತ್ತು 2024-25 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವವರು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಆಸಕ್ತರು ಸೇವಾಸಿಂಧು ಪೋರ್ಟಲ್ http:/sevasindhu.karnataka.gov.in ಮುಖಾಂತರ ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರೀಕ ಸೇವಾಕೇಂದ್ರಗಳಲ್ಲಿ ದಾಖಲೆಗಳ ಸಹಿತ ಜೂನ್ 30 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್ http://kssd.karnataka.gov.in ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ ಭಾಗ್ಯ ನಿಲಯ, 1ನೇ ತಿರುವು, ಗಾಂಧಿನಗರ ಶಿವಮೊಗ್ಗ. ಕಛೇರಿ ದೂ.ಸಂ. 08182-229634ನ್ನು ಸಂಪರ್ಕಿಸುವುದು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular