HomeLatest NewsBREAKING : ಬೆಂಗಳೂರು 'ಕಾಲ್ತುಳಿತ ದುರಂತ' : ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸೂಚಿಸಿ ಜೂ....

BREAKING : ಬೆಂಗಳೂರು ‘ಕಾಲ್ತುಳಿತ ದುರಂತ’ : ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸೂಚಿಸಿ ಜೂ. 10 ಕ್ಕೆ ವಿಚಾರಣೆ ನಿಗದಿಪಡಿಸಿದ ಹೈಕೋರ್ಟ್.!

ಬೆಂಗಳೂರು : ಆರ್ ಸಿಬಿ ವಿಜಯೋತ್ಸವದ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.

ಇಂದು ವಿಚಾರಣೆಗೆ ಕೈಗೆತ್ತಿಕೊಂಡ ಹೈಕೋರ್ಟ್ ವಾದ ವಿವಾದ ಆಲಿಸಿ ಘಟನೆ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಲು ಸೂಚನೆ ನೀಡಿ ಜೂನ್ 10 ಕ್ಕೆ ವಿಚಾರಣೆ ಮುಂದೂಡಿದೆ.

ಆರ್ ಸಿಬಿ ವಿಜಯೋತ್ಸವದ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವು ಹಾಗೂ ಹಲವರು ಗಾಯಗೊಂಡಿರುವ ದುರಂತದ ಬೆನ್ನಲ್ಲೇ ಹೈಕೋರ್ಟ್ ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸಿಕೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ಕಾಲ್ತುಳಿತ ದುರಂತದಲ್ಲಿ 11 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಆರ್ಸಿಬಿ ಗೆಲುವಿನ ಸಂಭ್ರಮಾಚರಣೆಯ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಗಾಯಗೊಂಡು ವಿವಿಧ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ. ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಹಾಗೂ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular