BIG NEWS: ಕಾಲ್ತುಳಿತ ದುರಂತದ ವೇಳೆ ಕಳ್ಳರ ಕೈಚಳಕ: ನೂರಾರು ಮೊಬೈಲ್ ಎಗರಿಸಿದ ಕಳ್ಳರು: 70ಕ್ಕೂ ಹೆಚ್ಚು ಕೇಸ್ ದಾಖಲು

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿಬಿ ಸಂಭ್ರಮಾಚರಣೆ ವೇಳೆ ಭೀಕರ ಕಾಲ್ತುಳಿತ ಸಂಭವಿಸಿ 11 ಜನರು ಸಾವನ್ನಪ್ಪಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಂತಹ ಸಂದರ್ಭದಲ್ಲಿಯೂ ಕಳ್ಳತನವನ್ನೇ ಕಾಯಕವನ್ನಾಗಿ ಮಾಡಿಕೊಂಡಿರುವ ಖದೀಮರು ಮೊಬೈಲ್ ಗಳನ್ನು ಕದ್ದು ಪರಾರಿಯಾಗಿದ್ದಾರೆ.

ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜನಸಂದಣಿ, ನೂಕುನುಗ್ಗಲು, ಕಾಲ್ತುಳಿತದ ವೇಳೆಯೇ ಕಳ್ಳರು ತಮ್ಮ ಕೈಚಳಕ ತೋರಿದ್ದು, ನೂರಾರು ಮೊಬೈಲ್ ಗಳನ್ನು ಎಗರಿಸಿದ್ದಾರೆ. ಈ ಬಗ್ಗೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಸಾಲು ಸಾಲು ಪ್ರಕರ್ಣ ದಾಖಲಾಗಿದೆ.

ಕಬ್ಬನ್ ಪಾರ್ಕ್ ಪೊಲೀಸ್ ಠಾನೆಯಲ್ಲಿ 70ಕ್ಕೂ ಹೆಚ್ಚು ಕೇಸ್ ಗಳು ದಾಖಲಾಗಿವೆ. ಮೊಬೈಲ್ ಕಳೆದುಕೊಂಡವರು ಠಾಣೆಯ ಬಳಿ ಸಾಲುಗಟ್ಟಿ ನಿಂತಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read