HomeLatest Newsರೈತರಿಗೆ ಗುಡ್ ನ್ಯೂಸ್: ಕೃಷಿ ಪಂಪ್ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ, 100 ವಿದ್ಯುತ್ ಉಪಕೇಂದ್ರ...

ರೈತರಿಗೆ ಗುಡ್ ನ್ಯೂಸ್: ಕೃಷಿ ಪಂಪ್ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ, 100 ವಿದ್ಯುತ್ ಉಪಕೇಂದ್ರ ಸ್ಥಾಪನೆ

ವಿದ್ಯುತ್‌ ಪ್ರಸರಣ ವ್ಯವಸ್ಥೆಯನ್ನು ಸುಗಮಗೊಳಿಸುವ ಉದ್ದೇಶದಿಂದ ರಾಜ್ಯದಲ್ಲಿ 100 ವಿದ್ಯುತ್‌ ಉಪಕೇಂದ್ರ(ಸಬ್‌ ಸ್ಟೇಷನ್‌) ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದ್ದು, ಕಾಲಮಿತಿಯೊಳಗೆ ಪೂರ್ಣಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.

ಕೃಷಿ ಪಂಪ್ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ಪೂರೈಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯದಲ್ಲಿ 4 ಲಕ್ಷ ಅಕ್ರಮ ಪಂಪ್ಸೆಟ್ ಗಳ ಪೈಕಿ 2.5 ಲಕ್ಷ ಪಂಪ್ಸೆಟ್ ಗಳನ್ನು ಸಕ್ರಮಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಫೀಡರ್ ಗಳಿಂದ 500 ಮೀಟರ್ ಒಳಗಿನ ಪಂಪ್ಸೆಟ್ ಗಳಿಗೆ ಟ್ರಾನ್ಸ್ಫಾರ್ಮರ್ ಒದಗಿಸಲಾಗುವುದು. 500 ಮೀಟರ್ ನಿಂದ ಹೊರಗಿನ ಪಂಪ್ಸೆಟ್ ಗಳಿಗೆ ಕುಸುಮ್ -ಬಿ ಯೋಜನೆಯಡಿ ಸೋಲಾರ್ ಪಂಪ್ಸೆಟ್ ಗಳನ್ನು ಒದಗಿಸಲಾಗುವುದು. ರೈತರಿಗೆ ಹಗಲು ವೇಳೆ ಸಮರ್ಪಕ ವಿದ್ಯುತ್ ಪೂರೈಕೆಗಾಗಿ ಕುಸುಮ್ -ಸಿ ಯೋಜನೆಯಡಿ ಫೀಡರ್ ನವೀಕರಣ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular