HomeLatest NewsBREAKING: ರಾಜಕೀಯವಾಗಿ ಸೇಫ್ ಆಗಲು ಪ್ರಾಥಮಿಕ ವಿಚಾರಣೆ ನಡೆಸದೇ ಪೊಲೀಸ್ ಅಧಿಕಾರಿಗಳ ತಲೆದಂಡ ಖಂಡನೀಯ: ಜ್ಯೋತಿಪ್ರಕಾಶ್...

BREAKING: ರಾಜಕೀಯವಾಗಿ ಸೇಫ್ ಆಗಲು ಪ್ರಾಥಮಿಕ ವಿಚಾರಣೆ ನಡೆಸದೇ ಪೊಲೀಸ್ ಅಧಿಕಾರಿಗಳ ತಲೆದಂಡ ಖಂಡನೀಯ: ಜ್ಯೋತಿಪ್ರಕಾಶ್ ಮಿರ್ಜಿ

ಬೆಂಗಳೂರು: ಇದು ಬೇಜವಾಬ್ದಾರಿ ಸರ್ಕಾರ ನಾಚಿಕೆಗೇಡಿನ ಸರ್ಕಾರವಾಗಿದೆ ಎಂದು ನಿವೃತ್ತ ಐಪಿಎಸ್ ಅಧಿಕಾರಿ ಜ್ಯೋತಿ ಪ್ರಕಾಶ್ ಮಿರ್ಜಿ ಹೇಳಿದ್ದಾರೆ.

ಕಾಲ್ತುಳಿತ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳ ತಲೆತಂಡ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪೊಲೀಸರ ಜೊತೆ ಸಹಕರಿಸಿ ಸರ್ಕಾರ ಕೆಲಸ ಮಾಡಬೇಕು. ಇದರಲ್ಲಿ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಡಿಜಿ ಐಜಿಪಿ ಅವರ ಪಾತ್ರ ಏನು ಇಲ್ಲವೇ ಎಂದು ಪ್ರಶ್ನಿಸಿದ್ದಾರೆ.

 ಒತ್ತಡ ಇದೆ ಎಂದು ಕಾರ್ಯಕ್ರಮ ಮಾಡುತ್ತಾರೆ. ಒತ್ತಡ ಇದೆ ಎಂದು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ರಾ ಎಂದು ಪ್ರಶ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿಸಿಎಂ ಡಿ.ಕೆ. ಶಿವಕುಮಾರ್ ಜೋರಾಗಿ ಓಡಾಡಿ ದಬ್ಬಾಳಿಕೆ ಮಾಡಿದ್ದಾರೆ. ಯಾವುದೇ ಪೂರ್ವ ತಯಾರಿ ಮಾಡಿಲ್ಲ. ಬಲವಂತದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ರಾಜಕೀಯವಾಗಿ ಸೇಫ್ ಆಗಲು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಮೈಲೇಜ್ ಪಡೆಯಲು ಕಾರ್ಯಕ್ರಮ ಕೈಗೊಂಡಿದ್ದಾರೆ. ಪ್ರಾಥಮಿಕ ವಿಚಾರಣೆ ನಡೆಸದೇ ಕ್ರಮ ಜರುಗಿಸಿರುವುದು ಖಂಡನೀಯ ಎಂದು ನಿವೃತ್ತ ಐಪಿಎಸ್ ಅಧಿಕಾರಿ ಜ್ಯೋತಿಪ್ರಕಾಶ್ ಮಿರ್ಜಿ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular