HomeLatest NewsBREAKING: ಸರ್ಕಾರವೇ ದೊಡ್ಡ ದುರಂತಕ್ಕೆ ಕಾರಣವಾಗಿದ್ದರೂ ಜನರ ಆಕ್ರೋಶ ತಣ್ಣಗಾಗಿಸಲು ಪೊಲೀಸ್ ಅಧಿಕಾರಿಗಳು ಬಲಿಪಶು: ಯಡಿಯೂರಪ್ಪ

BREAKING: ಸರ್ಕಾರವೇ ದೊಡ್ಡ ದುರಂತಕ್ಕೆ ಕಾರಣವಾಗಿದ್ದರೂ ಜನರ ಆಕ್ರೋಶ ತಣ್ಣಗಾಗಿಸಲು ಪೊಲೀಸ್ ಅಧಿಕಾರಿಗಳು ಬಲಿಪಶು: ಯಡಿಯೂರಪ್ಪ

ಬೆಂಗಳೂರು: ಕಾಲ್ತುಳಿತ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳ ತಲೆತಂಡ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ವತಃ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳೇ ಮುಂದೆ ನಿಂತು ಇಡೀ ಸರ್ಕಾರವೇ ವ್ಯವಸ್ಥೆಯ ಜವಾಬ್ದಾರಿ ಹೊತ್ತು, ಆರ್.ಸಿ.ಬಿ ವಿಜಯೋತ್ಸವದ ಆಚರಣೆಗೆ ಮುಂದಾಗಿ, ಇಂತಹ ಬಹುದೊಡ್ಡ ದುರಂತಕ್ಕೆ ಕಾರಣವಾಗಿರುವಾಗ, ತಮ್ಮ ನೈತಿಕ ಜವಾಬ್ದಾರಿಯನ್ನು ಮರೆತು, ಜನರ ಆಕ್ರೋಶವನ್ನು ತಣ್ಣಗಾಗಿಸಬಹುದೆಂಬ ದುರಾಲೋಚನೆಯಿಂದ ಪೊಲೀಸ್ ಆಯುಕ್ತರೂ ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಿ ಅಮಾನತು ಮಾಡಿರುವುದು ನಾಚಿಕೆಗೇಡಿನ ಕ್ರಮವಾಗಿದೆ ಎಂದು ತಿಳಿಸಿದ್ದಾರೆ.

ಸಮಾರಂಭಕ್ಕೂ ಮುನ್ನವೇ ಕಾಲ್ತುಳಿತದಿಂದ ಸಾವು-ನೋವಾಗಿರುವ ಸುದ್ದಿ ತಲುಪಿದರೂ ಭಂಡತನದಿಂದ ಸನ್ಮಾನ ಕಾರ್ಯಕ್ರಮವನ್ನು ಮುಗಿಸಿ, ನಂತರ ಚಿನ್ನಸ್ವಾಮಿ ಸ್ಟೇಡಿಯಂನಲ್ಲೂ ಕಾರ್ಯಕ್ರಮ ಮುಂದುವರೆಸಿ, ಕಾಂಗ್ರೆಸ್ ಸರ್ಕಾರ ಕರುನಾಡಿನಲ್ಲಿ ಕರಾಳ ಇತಿಹಾಸ ಸೃಷ್ಟಿಸಿದೆ ಎಂದು ಟೀಕಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜನರ ಆಕ್ರೋಶವನ್ನು ತಣಿಸಲು ಹಾಗೂ ಉಚ್ಚ ನ್ಯಾಯಾಲಯದ ನ್ಯಾಯದಂಡದಿಂದ ತಪ್ಪಿಸಿಕೊಳ್ಳಲು ಅಧಿಕಾರಿಗಳನ್ನು ಅಮಾನತುಗೊಳಿಸಿರುವುದು ಕುರ್ಚಿಗೆ ಅಂಟಿ ಕೂರುವ ಸ್ವಾರ್ಥದ ಕ್ರಮವಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹಮಂತ್ರಿ ಡಾ.ಜಿ. ಪರಮೇಶ್ವರ  ಅವರಿಗೆ ಕನಿಷ್ಠ ನೈತಿಕತೆ ಇದ್ದರೆ ಈ ದುರಂತ ಘಟನೆಯ ಜವಾಬ್ದಾರಿ ಹೊತ್ತು ಈ ಕೂಡಲೇ ರಾಜಿನಾಮೆ ನೀಡಲಿ ಎಂದು ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular