ಬೆಂಗಳೂರು : ಬೆಂಗಳೂರು ಕಾಲ್ತುಳಿತ ದುರಂತದ ಪ್ರಕರಣದ ತನಿಖೆ ಚುರುಕಾಗಿದ್ದು, ಪೊಲೀಸರು ಇದೀಗ ಸಿಸಿಬಿಯ ನಾಲ್ವರು ಆಯೋಜಕರನ್ನು ಬಂಧಿಸಿದ್ದಾರೆ.
ಹೌದು, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು RCB’ ಯ ನಾಲ್ವರು ಆಯೋಜಕರನ್ನು ಬಂಧಿಸಿದ್ದಾರೆ. ಸಿಬ್ಬಂದಿ ನಿಖಿಲ್ ಸೋಸಲೆ, ಸುನೀಲ್ ಮ್ಯಾಥ್ಯೂ, ಕಿರಣ್, ಸುಮಂತ್ ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಹಾಗೂ ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಆರ್ ಸಿಬಿ ವಿಜಯೋತ್ಸವದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಸಂಭವಿಸಿ 11 ಜನರು ಅಭಿಮಾನಿಗಳು ಸಾವನ್ನಪ್ಪಿದ್ದ ಪ್ರಕರಣ ಸಂಬಂಧ ಆರ್ ಸಿಬಿ ಮ್ಯಾನೇಜ್ಮೆಂಟ್ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಆರ್ ಸಿಬಿ ಮ್ಯಾನೇಜ್ಮೆಂಟ್ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಎ1 ಆರ್ ಸಿಬಿ ಮ್ಯಾನೇಜ್ಮೆಂಟ್, ಎ2 ಡಿಎನ್ ಎ ಇವೆಂಟ್ ಮ್ಯಾನೇಜ್ಮೆಂಟ್, ಎ3 ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಎಂದು ಪ್ರಕರಣ ದಾಖಲಾಗಿದೆ. ಬಿಎನ್ ಎಸ್ ಸೆಕ್ಷನ್ 105, 115, 118 ಅಡಿ ಮೊಕದ್ದಮೆ ದಾಖಲಾಗಿದೆ.