BIG NEWS: ಚಿನ್ನಸ್ವಾಮಿ ಸ್ಟೆಡಿಯಂನಲ್ಲಿ ಕಾಲ್ತುಳಿತ ಪ್ರಕರಣ: DNA ಮುಖ್ಯಸ್ಥ ನಾಪತ್ತೆ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತದಲ್ಲಿ 11 ಜನರು ಆರ್ ಸಿಬಿ ಅಭಿಮಾನಿಗಳು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐ ಆರ್ ದಾಖಲಾಗಿ ನಾಲ್ವರು ಆಯೋಜಕರು ಅರೆಸ್ಟ್ ಆಗುತ್ತಿದಂತೆ ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿ ಮುಖ್ಯಸ್ಥ ನಾಪತ್ತೆಯಾಗಿದ್ದಾರೆ.

ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿ ಡಿಎನ್ ಎ ಮಾಲೀಕ, ಮಾಜಿ ಸಿಎಂ ಕೆಂಗಲ್ ಹನುಮಂತಯ್ಯ ಮೊಮ್ಮಗ ವೆಂಕಟ್ ವರ್ಧನ್ ನಾಪತ್ತೆಯಾಗಿದ್ದಾರೆ.

ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಆರ್ ಸಿಬಿ, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್, ಹಾಗೂ ಕಾರ್ಯಕ್ರಮ ನಿರ್ವಹಣೆ ಮಾಡಿದ್ದ ಡಿಎನ್ ಎ ಕಂಪನಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾನೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಡಿಎನ್ ಎ ಕಂಪನಿ ಮಾಲೀಕ ವೆಂಕಟ್ ವರ್ಧನ್ ಬಂಧನಕ್ಕೆ ಪೊಲೀಸರು ಮುಂದಾಗಿದ್ದರು, ಆದರೆ ಅವರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read