JOB ALERT : ಕೀಟ ಸಂಗ್ರಾಹಕರ ನೇಮಕಾತಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ ಜಿಲ್ಲೆಗೆ ಎನ್‍ಹೆಚ್‍ಎಂ/ಎನ್‍ಬಿಡಿಸಿಪಿ ಕಾರ್ಯಕ್ರಮದಡಿಯಲ್ಲಿ ಹೊಸದಾಗಿ 01 ಹುದ್ದೆ ಕೀಟ ಸಂಗ್ರಾಹಕರನ್ನು ಒಂದು ವರ್ಷದ ಅವಧಿಗೆ ತಾತ್ಕಾಲಿಕವಾಗಿ ಆಯ್ಕೆ ಮಾಡಲಾಗುವುದು. ಈ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.

ಕನಿಷ್ಟ ವಿದ್ಯಾರ್ಹತೆ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಉತ್ತೀರ್ಣರಾಗಿರಬೇಕು. ತಮ್ಮ ಸ್ವ-ವಿವರಗಳೊಂದಿಗೆ ಸ್ವಯಂ ದೃಢೀಕರಣದೊಂದಿಗೆ ದಾಖಲಾತಿ ನಕಲು ಪ್ರತಿಗಳೊಂದಿಗೆ ಇದೇ ಜೂನ್ 10ರಂದು ಸಂಜೆ 4.30ರೊಳಗೆ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣ, ಚಿತ್ರದುರ್ಗ ಇಲ್ಲಿಗೆ ಖುದ್ದಾಗಿ ಸಲ್ಲಿಸುವುದು.

ಸ್ವ-ವಿವರದೊಂದಿಗೆ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಜಾತಿ ಮತ್ತು ಆದಾಯ ದೃಢೀಕರಣ ಪತ್ರ, ದ್ವಿಚಕ್ರ ಚಾಲನಾ ಪರವಾನಿಗೆ ಪತ್ರದೊಂದಿಗೆ ಸಲ್ಲಿಸಬೇಕು ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read