HomeLatest NewsSHOCKING NEWS: ಮೂರು ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್; ಕೃತ್ಯದ ಬಳಿಕ ಮೆಟ್ರೋ ಸೇತುವೆ...

SHOCKING NEWS: ಮೂರು ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್; ಕೃತ್ಯದ ಬಳಿಕ ಮೆಟ್ರೋ ಸೇತುವೆ ಕೆಳಗೆ ಎಸೆದು ಹೋದ ದುರುಳರು

ಮೂರು ವರ್ಷದ ಬಾಲಕಿ ಮೇಲೆ ಕಾಮುಕರು ಅಟ್ಟಹಾಸ ಮೆರೆದಿದ್ದು, ಗ್ಯಾಂಗ್ ರೇಪ್ ನಡೆಸಿರುವ ಘಟನೆ ಉತ್ತರ ಪ್ರದೇಶದ ಲಕ್ನೋದ ಆಲಂಬಾಗ್ ಪ್ರದೇಶದಲ್ಲಿ ನಡೆದಿದೆ.

ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಬಳಿಕ ಬಾಲಕಿಯನ್ನು ಮೆಟ್ರೋ ಸೇತುವೆ ಕೆಳೆಗೆ ಎಸೆದು ಹೋಗಿದ್ದಾರೆ. ಪ್ರಜ್ಞಾಹೀನ ಸ್ಥಿತಿಯಲ್ಲಿ ಬಾಲಕಿ ಪತ್ತೆಯಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದುಷ್ಕರ್ಮಿಗಳು ಬಾಲಕಿಯನ್ನು ಕಿಡ್ನ್ಯಾಪ್ ಮಾಡಿ ಕೃತ್ಯವೆಸಗಿದ್ದಾರೆ. ಚಂದಾನಗರ ಮೆಟ್ರೋ ನಿಲ್ದಾಣದ ಬಳಿ ಬಾಲಕಿಯ ಪೋಷಕರು ವಾಸವಾಗಿದ್ದಾರೆ. ಬೆಳಿಗ್ಗೆಯಿಂದ ಬಾಲಕಿ ಕಾಣದಿದ್ದಾಗ ಪೋಷಕರು ತೀವ್ರ ಹುಡುಕಾತ ನಡೆಸಿದ್ದಾರೆ. ಈ ವೇಳೆ ಬಾಲಕಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಆಲಂಬಾಗ್ ಮೆಟ್ರೋ ಸೇತಿವೆ ಬಳಿ ಪತ್ತೆಯಾಗಿದ್ದಾಳೆ.

ಆಲಂಬಾಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular