HomeLatest NewsGOOD NEWS : 'ಸ್ವಾವಲಂಬಿ ಸಾರಥಿ' ಯೋಜನೆಯಡಿ ವಾಹನ ಖರೀದಿಗೆ ಸಿಗಲಿದೆ 3 ಲಕ್ಷ ಸಹಾಯಧನ,...

GOOD NEWS : ‘ಸ್ವಾವಲಂಬಿ ಸಾರಥಿ’ ಯೋಜನೆಯಡಿ ವಾಹನ ಖರೀದಿಗೆ ಸಿಗಲಿದೆ 3 ಲಕ್ಷ ಸಹಾಯಧನ, ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.!

ಡಿಜಿಟಲ್ ಡೆಸ್ಕ್ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಸೇವಾ ಸಿಂಧು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸ್ವಾವಲಂಬಿ ಸಾರಥಿ ಯೋಜನೆಯಡಿ ವಾಹನ ಖರೀದಿಗೆ 3 ಲಕ್ಷ ಸಹಾಯಧನ ನೀಡಲಾಗುತ್ತಿದ್ದು, ಈ ದಾಖಲೆ, ಅರ್ಹತಾ ಮಾನದಂಡ ಕಡ್ಡಾಯವಾಗಿದೆ.

ಅರ್ಹತಾ ಮಾನದಂಡಗಳು
• ವಯಸ್ಸು: ಕನಿಷ್ಠ 21 ವರ್ಷ, ಗರಿಷ್ಠ 45 ವರ್ಷ
• ಆದಾಯ ಮಿತಿಯು:
• ಗ್ರಾಮಾಂತರ ಪ್ರದೇಶ: ವಾರ್ಷಿಕ ₹98,000 ಒಳಗೆ
• ನಗರ ಪ್ರದೇಶ: ವಾರ್ಷಿಕ ₹1,20,000 ಒಳಗೆ
• ಚಾಲನಾ ಪರವಾನಗಿ: ಸರಿಯಾಗಿ ಲಘು ವಾಹನ ಚಾಲನಾ ಪರವಾನಗಿ ಹೊಂದಿರಬೇಕು ಹಾಗೂ ಈ ಹಿಂದೆ ಯಾವುದೇ ಸರ್ಕಾರಿ ಯೋಜನೆಯಿಂದ ಲಾಭ ಪಡೆದಿರಬಾರದು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ದಾಖಲೆಗಳು ಕಡ್ಡಾಯ
• ಜಾತಿ ಹಾಗೂ ಆದಾಯ ಪ್ರಮಾಣಪತ್ರ
• ಆಧಾರ್ ಕಾರ್ಡ್
• ಚಾಲನಾ ಪರವಾನಗಿ ಪ್ರತಿ ( ಡಿ ಎಲ್)
• ಬ್ಯಾಂಕ್ ಪಾಸ್ ಬುಕ್ ನಕಲು
• ವಾಹನದ ಅಂದಾಜು ಕ್ವೊಟೇಶನ್/ಬೆಲೆಪಟ್ಟಿ
• ಸ್ವಯಂ ಘೋಷಣಾ ಪತ್ರ

ಅರ್ಜಿ ಸಲ್ಲಿಕೆ ವಿಧಾನ
• ಆನ್ಲೈನ್ ಮೂಲಕ: Seva Sindhu ಪೋರ್ಟಲ್
• ಆಫ್ಲೈನ್ ಮೂಲಕ: ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ

ಹೆಚ್ಚಿನ ಮಾಹಿತಿಗಾಗಿ 080-22374832 8050770004 / 8050770005 ಸಂಪರ್ಕಿಸಬಹುದಾಗಿದೆ.

ಇತರ ಯೋಜನೆಗಳು
ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರö್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆ.

ಈ ಮೇಲ್ಕಂಡ ಯೋಜನೆಗಳು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ ಉಳಿದ ಸಮುದಾಯಗಳಿಗೆ ಮಾತ್ರ ಅನ್ವಯವಾಗುತ್ತದೆ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ).

ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.2023-24 ಮತ್ತು 2024-25ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಅರ್ಹ ಹಿಂದುಳಿದ ವರ್ಗದವರು ಅರ್ಜಿಗಳನ್ನು ಆನ್ಲೈನ್ ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಸಲ್ಲಿಸಬಹುದು. ಮಾಹಿತಿಗಾಗಿ ನಿಗಮದ ವೆಬ್ ಸೈಟ್ www.dbcdc.karnataka.gov.in ಗೆ ಸಂಪರ್ಕಿಸಬಹುದು. ಜೂ.30 ಅರ್ಜಿ ಸಲ್ಲಿಸಲು ಕೊನೆಯ ದಿನ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular