HomeLatest NewsGOOD NEWS : ರಾಜ್ಯದ ಜನತೆಗೆ ಗುಡ್ ನ್ಯೂಸ್ : ಗಂಗಾ ಕಲ್ಯಾಣ, ಸ್ವಾವಲಂಬಿ ಸಾರಥಿ...

GOOD NEWS : ರಾಜ್ಯದ ಜನತೆಗೆ ಗುಡ್ ನ್ಯೂಸ್ : ಗಂಗಾ ಕಲ್ಯಾಣ, ಸ್ವಾವಲಂಬಿ ಸಾರಥಿ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ.!

ಡಿಜಿಟಲ್ ಡೆಸ್ಕ್ : ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಅಲೆಮಾರಿ/ಅರೆಅಲೆಮಾರಿ ಅಭಿವೃದ್ಧಿ ನಿಗಮಗಳಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ, ಶೈಕ್ಷಣಿಕ ಸಾಲ ಯೋಜನೆ, ಗಂಗಾ ಕಲ್ಯಾಣ, ಹೀಗೆ ವಿವಿಧ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್, 30 ಕೊನೆಯ ದಿನವಾಗಿದೆ. ಸೇವಾಸಿಂಧು ಪೆÇೀರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನಿಗಮದ ವೆಬ್ಸೈಟ್ ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮ www.kaad.karnataka.gov.in, ಸವಿತಾ ಸಮಾಜ ಅಭಿವೃದ್ಧಿ ನಿಗಮ www.kssd.karnataka.gov.in, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ www.dbcdc.karnataka.gov.in, ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮ https://kvldcl.karnataka.gov.in, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ದಿ ನಿಗಮ www.kmmd.karnataka.gov.in ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ.

ನಿಗಮದ ಸಹಾಯವಾಣಿ ಸಂಖ್ಯೆ:080-22374832 ಮತ್ತು 8050770004 ಅಥವಾ 8050770005 ಸಂಪರ್ಕಿಸಬಹುದು. ಸೇವಾಸಿಂಧು ತಂತ್ರಾಂಶದ ಮುಖಾಂತರ ಅರ್ಜಿ ಸಲ್ಲಿಸಲು ಜೂನ್ 30 ಕೊನೆ ದಿನವಾಗಿದೆ. ಹೆಚ್ಚಿನ ವಿವರಗಳಿಗೆ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಕೊಡಗು ಜಿಲ್ಲೆ ಮಡಿಕೇರಿ ಇವರನ್ನು ದೂರವಾಣಿ ಸಂಖ್ಯೆ: 08272-221656 ಮುಖಾಂತರ ಸಂಪರ್ಕಿಸಬಹುದು ಎಂದು ಕೊಡಗು ವಿವಿಧ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಮಹಾದೇವಿ ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular