HomeLatest NewsBIG NEWS : ರಾಜ್ಯದ ಆರೋಗ್ಯ ಇಲಾಖೆಯ ನೌಕರರಿಗೆ "ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆ" ಅನುಷ್ಠಾನಕ್ಕೆ...

BIG NEWS : ರಾಜ್ಯದ ಆರೋಗ್ಯ ಇಲಾಖೆಯ ನೌಕರರಿಗೆ “ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆ” ಅನುಷ್ಠಾನಕ್ಕೆ ಸರ್ಕಾರ ಅನುಮೋದನೆ

ಬೆಂಗಳೂರು : ರಾಜ್ಯದ ಆರೋಗ್ಯ ಇಲಾಖೆಯ ನೌಕರರ ಹಾಜರಾತಿ ಗುರುತಿಸಲು “ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆ” ಅನುಷ್ಠಾನಕ್ಕೆ ಸರ್ಕಾರ ಅನುಮೋದನೆ ನೀಡಿದೆ.

ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಯೋಜನೆಗಳಿಗೆ ದೊರೆತ ಅನುದಾನ ಮತ್ತು ಇಲಾಖೆ ಕುರಿತು ತೆಗೆದುಕೊಂಡ ಪ್ರಮುಖ ನಿರ್ಣಯಗಳು ಇಲ್ಲಿವೆ.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ ಹಾಗೂ ನಿರ್ವಹಣೆಗಾಗಿ ಗೃಹ ಆರೋಗ್ಯ ಯೋಜನೆ ಜಾರಿಗೊಳಿಸಿ, ಅಗತ್ಯವಿರುವ ತಪಾಸಣಾ ಉಪಕರಣಗಳು ಹಾಗೂ ಔಷಧಿಗಳನ್ನು ಖರೀದಿಸಲು ಒಟ್ಟು 185.74 ಕೋಟಿ ರೂಪಾಯಿ ಅನುದಾನ.ಶ್ರವಣ ಸಂಜೀವಿನಿ ಯೋಜನೆ ಅನುಷ್ಠಾನಕ್ಕೆ ಒಟ್ಟು 12 ಕೋಟಿ ರೂಪಾಯಿ ಅನುದಾನ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೌಕರರ ಹಾಜರಾತಿ ಗುರುತಿಸಲು “ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆ” ಅನುಷ್ಠಾನಕ್ಕೆ ಅನುಮೋದನೆ.108 ಆರೋಗ್ಯ ಕವಚ ಸೇವೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಿರ್ವಹಿಸಲು ರಾಜ್ಯ ಮಟ್ಟದಲ್ಲಿ ಕಮಾಂಡ್ ಅಂಡ್ ಕಂಟ್ರೋಲ್ ಸೆಂಟರ್ ಸ್ಥಾಪಿಸಲು ಹಾಗೂ ಜಿಲ್ಲಾಡಳಿತದ ಮುಖಾಂತರ ಆಂಬ್ಯುಲೆನ್ಸ್ಗಳ ನಿರ್ವಹಣೆಗೆ ಅನುಮೋದನೆ ನೀಡಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular