HomeLatest Newsರಾಜ್ಯ ಸರ್ಕಾರದಿಂದ 'ವೀರಶೈವ ಲಿಂಗಾಯಿತ' ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ...

ರಾಜ್ಯ ಸರ್ಕಾರದಿಂದ ‘ವೀರಶೈವ ಲಿಂಗಾಯಿತ’ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ವಿವಿಧ ಯೋಜನೆಗಳಾದ ಶೈಕ್ಷಣಿಕ ಸಾಲ ಯೋಜನೆ, ಜೀವಜಲ ಯೋಜನೆ, ಕಾಯಕಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಂಭಿ ಸಾರಥಿ ಯೋಜನೆ, ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಸ್ವ ಸಹಾಯ ಸಂಘಗಳ ಉತ್ತೇಜನ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳಿಗೆ ಸೇರಿದ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಸವಿತಾ ಕಾಡುಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ) ಸಮುದಾಯಗಳ ಆಸಕ್ತರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ಈ ಮೇಲಿನ ಯೋಜನೆಯ ಫಲಾನುಭವಿಗಳಾಗಲು ಅರ್ಜಿದಾರರು ತಮ್ಮ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿರಬೇಕು. ನಿಗಮವು ಅನುಷ್ಠಾನಗೊಳಿಸುವ ಈ ಮೇಲ್ಕಂಡ ಯೋಜನೆಗಳಲ್ಲಿ ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ಅಧ್ಯಕ್ಷರು ಅಥವಾ ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್ ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸುವುದು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ. 2023-24 ಹಾಗೂ 2024-25 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಆಯ್ಕೆಯಾಗದವರು ಅದೇ ಯೋಜನೆಗೆ ಈ ವರ್ಷ ಮರು ಅರ್ಜಿ ಸಲ್ಲಿಸುವ ಅಗತ್ಯತೆ ಇರುವುದಿಲ್ಲ.

ಆಸಕ್ತರು ಸೇವಾಸಿಂಧು ಪೋರ್ಟಲ್ http:/sevasindhu.karnataka.gov.in ಮುಖಾಂತರ ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರೀಕ ಸೇವಾಕೇಂದ್ರಗಳಲ್ಲಿ ದಾಖಲೆಗಳ ಸಹಿತ ಜೂನ್ 30 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ https://kvldcl.karnataka.gov.in ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮ(ನಿ), ಭಾಗ್ಯ ನಿಲಯ, 1ನೇ ತಿರುವು ಗಾಂಧಿನಗರ, ಶಿವಮೊಗ್ಗ ಇಲ್ಲಿ ಪಡೆಯಬಹುದಾಗಿದೆ. ದೂ.ಸಂ. 08182-229634 ಗೆ ಸಂಪರ್ಕಿಸಬಹುದಾಗಿರುತ್ತದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular