HomeLatest NewsBREAKING: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಮೆಸ್ಕಾಂ ಇಂಜಿನಿಯರ್

BREAKING: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಮೆಸ್ಕಾಂ ಇಂಜಿನಿಯರ್

ಉಡುಪಿ: ಬ್ರಹ್ಮಾವರ ಮೆಸ್ಕಾಂ ಇಂಜಿನಿಯರ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.

ಮೆಸ್ಕಾಂ ಸಹಾಯಕ ಇಂಜಿನಿಯರ್ ಅಶೋಕ್ ಪೂಜಾರಿ ಲೋಕಾಯುಕ್ತ ಬಲೆಗೆ ಬಿದ್ದವರು. ಮನೆಯೊಂದಕ್ಕೆ ವಿದ್ಯುತ್ ಸಂಪರ್ಕ ನೀಡಲು ಅಶೋಕ್ ಪೂಜಾರಿ ಲಂಚಕ್ಕೆ ಬೇದಿಕೆ ಇಟ್ಟಿದ್ದರು. ಕಳೆದ ತಿಂಗಳು ಸ್ಥಳ ಪರಿಶೀಲನೆ ನಡೆಸಿ, ಬಳಿಕ 20,000 ರೂ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ದಿನೇಶ್ ಪೂಜಾರಿ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ಇಂದು ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಇಂಜಿನಿಯರ್ ಅಶೋಕ್ ಪೂಜಾರಿ ಲಂಚದ ಹಣದ ಸಮೇತ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸದ್ಯ ಲೋಕಾಯುಕ್ತ ಅಧಿಕಾರಿಗಳು ದಿನೇಶ್ ಪೂಜಾರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular