HomeLatest NewsBREAKING: ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ಮಡೆನೂರು ಮನುಗೆ ಜಾಮೀನು, ಇಂದು ಬಿಡುಗಡೆ

BREAKING: ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ಮಡೆನೂರು ಮನುಗೆ ಜಾಮೀನು, ಇಂದು ಬಿಡುಗಡೆ

ಬೆಂಗಳೂರು: ನಟ ಮಡೆನೂರು ಮನುಗೆ ಜಾಮೀನು ಮಂಜೂರು ಹಿನ್ನೆಲೆಯಲ್ಲಿ ಇಂದು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ಮಡೆನೂರು ಮನು ಇಂದು ಬಿಡುಗಡೆಯಾಗಲಿದ್ದಾರೆ.

ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಮಡೆನೂರು ಮನುಗೆ ರಿಲೀಫ್ ಸಿಕ್ಕಿದೆ. ಪ್ರಕರಣದಲ್ಲಿ ಅವರಿಗೆ ಜಾಮೀನು ನೀಡಲಾಗಿದೆ. ಶನಿವಾರ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಡೆನೂರು ಮನು ನಟಿಸಿರುವ ‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾ ಬಿಡುಗಡೆಯಾಗುವ ಒಂದು ದಿನ ಮೊದಲು ಅವರು ಬಂಧಿತರಾಗಿದ್ದರು. ’ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋ ಮೂಲಕ ಗುರುತಿಸಿಕೊಂಡಿದ್ದ ಅವರು ‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾದಲ್ಲಿ ನಾಯಕರಾಗಿ ಅಭಿನಯಿಸಿದ್ದಾರೆ. ಚಿತ್ರ ಬಿಡುಗಡೆ ಹೊತ್ತಿನಲ್ಲಿ ಸಹ ನಟಿಯಿಂದ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಅವರನ್ನು ಬಂಧಿಸಲಾಗಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular