ದಕ್ಷಿಣ ಕನ್ನಡ : ಬೆಳ್ಳಂ ಬೆಳಗ್ಗೆ ಖಾಸಗಿ ಬಸ್ ಪಲ್ಟಿಯಾಗಿ 10 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಕಡಬದ ಗುಂಡ್ಯ ಬಳಿ ನಡೆದಿದೆ.
ಬೆಂಗಳೂರಿನಿಂದ ಪುತ್ತೂರಿಗೆ ತೆರಳುತ್ತಿದ್ದ ಬಸ್ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ 10 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
TAGGED:ದಕ್ಷಿಣಕನ್ನಡ ಜಿಲ್ಲೆ