HomeLatest NewsBIG NEWS: ಪತ್ನಿ ಹತ್ಯೆಗೈದು ತಲೆಮರೆಸಿಕೊಂಡಿದ್ದ ಪತಿ ಅರೆಸ್ಟ್: ಪೊಲೀಸ್ ಠಾಣೆಯಿಂದ ಕೂಗಳತೆ ದೂರದಲ್ಲಿಯೇ ನಡೆದಿದ್ದ...

BIG NEWS: ಪತ್ನಿ ಹತ್ಯೆಗೈದು ತಲೆಮರೆಸಿಕೊಂಡಿದ್ದ ಪತಿ ಅರೆಸ್ಟ್: ಪೊಲೀಸ್ ಠಾಣೆಯಿಂದ ಕೂಗಳತೆ ದೂರದಲ್ಲಿಯೇ ನಡೆದಿದ್ದ ಘಟನೆ!

ಚಾಮರಾಜನಗರ: ಚಾಮರಾಜನಗರದಲ್ಲಿ ಪತ್ನಿಯನ್ನು ಹತ್ಯೆಗೈದು ತಲೆಮರೆಸಿಕೊಂಡಿದ್ದ ಪತಿಯನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ.

ಚಾಮರಾಜನಗರದ ಪೊಲೀಸ್ ಠಾಣೆಯಿಂದ ಕೂಗಳತೆ ದೂರದಲ್ಲಿಯೇ ಜೂನ್ 3ರಂದು ನಡೆದಿದ್ದ ಘಟನೆ ಇದಾಗಿದ್ದು, ಸದ್ಯ ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಗಿರೀಶ್ ಬಂಧಿತ ಆರೋಪಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪತ್ನಿ ವಿದ್ಯಾಳ ಅನೈತಕ ಸಂಬಂಧಕ್ಕೆ ಬೇಸತ್ತು ಗಿರೀಶ್ ಆಕೆಯನ್ನು ಕುಡಗೋಲಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದ. ಪತ್ನಿ ವಿದ್ಯಾ ಅನ್ಯಜಾತಿಯ ಯುವಕನೊಂದಿಗೆ ಓಡಿ ಹೋಗಿದ್ದಳು. ಗಿರೀಶ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದ. ಚಾಮರಾಜನಗರ ಪೊಲೀಸರು ಪತಿ ಗಿರೀಶ್ ಹಾಗೂ ಪತ್ನಿ ವಿದ್ಯಾ ಇಬ್ಬರನ್ನೂ ಠಾಣೆಗೆ ಕರೆಸಿ ಬುದ್ಧಿವಾದ ಹೇಳಿದ್ದರು. ಅಲ್ಲದೇ ಪತ್ನಿ ಮೇಲೆ ಹಲ್ಲೆ ನಡೆಸದಂತೆ ಮುಚ್ಚಳಿಕೆ ಪತ್ರವನ್ನೂ ಬರೆಸಿಕೊಂಡು ಇಬ್ಬರನ್ನೂ ಕಳುಹಿಸಿದ್ದರು.

ಪೊಲೀಸ್ ಠಾಣೆಯಿಂದ ಹೊರಬಂದ ಗಿರೀಶ್ ಕುಡುಗೋಲಿನಿಂದ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದು ಎಸ್ಕೇಪ್ ಆಗಿದ್ದ. ಮೂರು ದಿನಗಳಿಂದ ತಲೆಮರೆಸಿಕೊಂಡಿದ್ದ ಗಿರೀಶ್ ನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular