ಬೆಂಗಳೂರು : ಭೀಕರ ಕಾಲ್ತುಳಿತ ದುರಂತ ನಡೆದ ಸ್ಥಳ ಚಿನ್ನಸ್ವಾಮಿ ಸ್ಟೇಡಿಯಂಗೆ ಸಿಐಡಿ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಭೀಕರ ಕಾಲ್ತುಳಿತ ದುರಂತ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.ಕಾಲ್ತುಳಿತ ದುರಂತ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಿ ಡಿಜಿ & ಐಜಿಪಿ ಆದೇಶ ಹೊರಡಿಸಿದ್ದಾರೆ. ಇಂದು ಸಿಐಡಿ ಪ್ರಕರಣದ ತನಿಖೆ ನಡೆಸುತ್ತಿದೆ.
ಇನ್ನೂ, ಬೆಂಗಳೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಿಂದ KSCA ಪದಾಧಿಕಾರಿಗಳು ಹೈಕೋರ್ಟ್ ಮೊರೆಹೋಗಿದ್ದು, ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಕೆ ಎಸ್ ಸಿಎ ಆಡಳಿತ ಮಂಡಳಿ ಅಧ್ಯಕ್ಷ ರಘುರಾಮ್ ಭಟ್ , ಕಾರ್ಯದರ್ಶಿ ಎಂ ಶಂಕರ್., ಖಜಾಂಚಿ ಇಎಸ್ ಜೈರಾಮ್ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಎಫ್ ಐ ರದ್ದು ಕೋರಿ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
a
TAGGED:ಕಾಲ್ತುಳಿತ ದುರಂತ